Breaking NewsLatestರಾಜ್ಯಸುದ್ದಿ
ಧ್ವನಿವರ್ಧಕಗಳ ವಿಷಯದಲ್ಲಿ ಸುಪ್ರೀಂ ಕೋರ್ಟ್ ಆದೇಶ ಪಾಲನೆಯಾಗುತ್ತಿಲ್ಲ: ಸಿದ್ದಲಿಂಗ ಸ್ವಾಮೀಜಿ ಆರೋಪ

ಸಾರ್ವಜನಿಕರಿಗೆ ಆಗುತ್ತಿರುವ ಕಿರಿಕಿರಿ ತಪ್ಪಿಸಲು ಎಲ್ಲಾ ಮಸೀದಿಗಳ ಧ್ವನಿವರ್ಧಕಗಳನ್ನು ತೆರವುಗೊಳಿಸಬೇಕು. ಇಲ್ಲದಿದ್ದರೆ ರಾಜ್ಯದ ಎಲ್ಲಾ ಹಿಂದೂ ದೇವಾಲಯಗಳಲ್ಲೂ ಹನುಮಾನ್ ಚಾಲೀಸ ಹಾಗೂ ರಾಮನಾಮ ಭಜನೆಗಳನ್ನು ಧ್ವನಿವರ್ಧಕದ ಮೂಲಕ ಪ್ರಸಾರ ಮಾಡುವುದಾಗಿ ಶ್ರೀರಾಮಸೇನೆ ರಾಜ್ಯ ಘಟಕದ ಅಧ್ಯಕ್ಷ ಆಂದೋಲಾ ಸಿದ್ಧಲಿಂಗ ಸ್ವಾಮೀಜಿ ಹೇಳಿದ್ದಾರೆ.
ಧ್ವನಿವರ್ಧಕಗಳ ವಿಷಯದಲ್ಲಿ ಸುಪ್ರೀಂ ಕೋರ್ಟ್ ಆದೇಶ ಪಾಲನೆಯಾಗುತ್ತಿಲ್ಲ. ಇದನ್ನು ಖಂಡಿಸಿ ಏ.13ರಂದು ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು. ಬಳಿಕ ಮಸೀದಿ ಸಮಿತಿಗಳು ಹಾಗೂ ರಾಜ್ಯ ಸರ್ಕಾರದ ವಿರುದ್ಧ ರಿಟ್ ಅರ್ಜಿ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.
ಮಸೀದಿಗಳ ಮೇಲಿನ ಧ್ವನಿವರ್ಧಕ ತೆರೆವುಗೊಳಿಸದೇ ಇದ್ದರೆ ರಾಮನವಮಿಯ ದಿನ ಏಪ್ರಿಲ್ 10ರಂದು ಎಲ್ಲಾ ದೇವಸ್ಥಾನಗಳಲ್ಲೂ ನಾವೇ ಧ್ವನಿವರ್ಧಕ ಹಾಕಿ,ಭಜನೆ ಆರಂಭಿಸುತ್ತೇವೆ. ಕಾನೂನು ಎಲ್ಲರಿಗೂ ಒಂದೇ ಆಗಲಿ ಎಂದು ಹಿಂದೂ ಮಹಿಳಾ ಜಾಗೃತಿ ವೇದಿಕೆ ನಾಯಕಿ ದಿವ್ಯಾ ಹಾಗರಗಿ ತಿಳಿಸಿದ್ದಾರೆ.
