Breaking NewsLatestರಾಷ್ಟ್ರೀಯಸುದ್ದಿ

ಮಧ್ಯಪ್ರದೇಶ ಭೀಕರ ರಸ್ತೆ ಅಪಘಾತ: ಮೃತರ ಕುಟುಂಬಕ್ಕೆ ರೂ.2 ಲಕ್ಷ ಪರಿಹಾರ ಯೋಗಿ ಆದಿತ್ಯನಾಥ್

ರೇವಾ: ಮಧ್ಯಪ್ರದೇಶದಲ್ಲಿ ನಡೆದ ಭೀಕರ ರಸ್ತೆ ಅಪಘಾತ ಪ್ರಕರಣಕ್ಕೆ ತೀವ್ರ ಸಂತಾಪ ಸೂಚಿಸಿರುವ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಮೃತರ ಕುಟುಂಬಕ್ಕೆ ರೂ.2 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.

ಮಧ್ಯಪ್ರದೇಶದ ರೆವಾ ಜಿಲ್ಲೆಯ ಸುಹಾಸಿ ಪಹರಿ ಬಳಿ ಬಸ್ ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿದ್ದು, ಈ ವೇಳೆ ಸಂಭವಿಸಿದ ಅಪಘಾತದಲ್ಲಿ ಉತ್ತರಪ್ರದೇಶದ 14 ಮಂದಿ ಮೃತಪಟ್ಟಿದ್ದಾರೆ. ಬಸ್ ಹೈದರಾಬಾದ್ನಿಂದ ಗೋರಖ್ಪುರಕ್ಕೆ ತೆರಳುತ್ತಿದ್ದು, ಬಸ್ನಲ್ಲಿದ್ದವರೆಲ್ಲ ಉತ್ತರ ಪ್ರದೇಶದ ನಿವಾಸಿಗಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಗೆ ಸಂಬಂಧ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ, ಯೋಗಿ ಆದಿತ್ಯನಾಥ್ ಅವರು, “ಗಾಯಗೊಂಡವರ ಚಿಕಿತ್ಸೆಗಾಗಿ ಮತ್ತು ಮೃತ ಉತ್ತರಪ್ರದೇಶದ ನಿವಾಸಿಗಳ ಪಾರ್ಥಿವ ಶರೀರವನ್ನು ರಾಜ್ಯಕ್ಕೆ ಕರೆತರುವ ಕುರಿತು ಮಧ್ಯಪ್ರದೇಶದ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಲಾಗಿದೆ. ಮೃತರ ಕುಟುಂಬಕ್ಕೆ ಸರ್ಕಾರ ರೂ.2 ಲಕ್ಷ ಪರಿಹಾರ ನೀಡಲಿದ್ದು, ಗಾಯಾಳುಗಳಿಗೆ ರೂ.50 ಸಾವಿರ ಪರಿಹಾರ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button