Breaking NewsLatestಬಾಲಿವುಡ್ಮನರಂಜನೆಸಿನಿಮಾ

ನಟಿ ಮಲೈಕಾ ಆರೋರಾ ಕಾರು ಅಪಘಾತ: ಆಸ್ಪತ್ರೆಗೆ ದಾಖಲು

ನಟಿ ಮಲೈಕಾ ಆರೋರಾ ಚಲಿಸುತ್ತಿದ್ದ ಕಾರು ಅಪಘಾತಕ್ಕೆ ಒಳಗಾಗಿದ್ದು, ತಲೆಗೆ ಬಲವಾದ ಪೆಟ್ಟು ಬಿದ್ದಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಲೈಕಾ ಅರೋರಾ ಅವರ ತಲೆಗೆ ಪೆಟ್ಟು ಬಿದ್ದಿದೆ ಎಂಬ ಮಾಹಿತಿ ಕೇಳಿಬಂದಿದೆ. ಕಣ್ಣಿಗೂ ಸಹ ಗಾಯ ಆಗಿದೆ ಎನ್ನಲಾಗುತ್ತಿದೆ. ಪುಣೆಯಲ್ಲಿ ಒಂದು ಫ್ಯಾಷನ್ ಈವೆಂಟ್ ಮುಗಿಸಿಕೊಂಡು ವಾಪಸ್ ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಮಲೈಕಾ ಅವರನ್ನು ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಆಕ್ಸಿಡೆಂಟ್ನಿಂದ ಜಖಂ ಆಗಿರುವ ಕಾರಿನ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮಲೈಕಾ ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಅವರ ಅಭಿಮಾನಿಗಳು ಮತ್ತು ಸ್ನೇಹಿತರು ಪ್ರಾರ್ಥಿಸುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಬಗ್ಗೆ ಹೆಚ್ಚಿನ ಮಾಹಿತಿ ಸಿಗಬೇಕಿದೆ.

Spread the love

Related Articles

Leave a Reply

Your email address will not be published. Required fields are marked *

Back to top button