Breaking NewsLatestಕ್ರೈಂಜಿಲ್ಲಾ ಸುದ್ದಿರಾಜ್ಯಸುದ್ದಿಹುಬ್ಬಳ್ಳಿ - ಧಾರವಾಡ

ವ್ಯಕ್ತಿ ಆತ್ಮಹತ್ಯೆ: 3ನೇ ಮಹಡಿಯಿಂದ ಬಿದ್ದು ಸ್ಥಳದಲ್ಲಿಯೇ ಸಾವು

ಹುಬ್ಬಳ್ಳಿ: ಮನನೊಂದ ವ್ಯಕ್ತಿಯೊಬ್ಬ ಅಪಾರ್ಟ್‌ಮೆಂಟಿನ ಮೂರನೇ ಮಹಡಿಯ ಮೇಲಿಂದ ಬಿದ್ದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಬ್ಬಳ್ಳಿಯ ಗೋಕುಲ್‌ ರೋಡ್‌ನಲ್ಲಿ ಇಂದು ನಡೆದಿದೆ. ‌


36 ವರ್ಷದ ಶರಣ ಪಟ್ಟಣಶೆಟ್ಟಿ ಎಂಬುವವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ. ಗೋಕುಲ್ ರಸ್ತೆಯ ಶ್ರಿಯಾ ಎನ್ ಕ್ಲೇವ್ ಅಪಾರ್ಟ್‌ಮೆಂಟ್ ನಿಂದ ಬಿದ್ದು ಶರಣು ಸಾವನ್ನಪ್ಪಿದ್ದಾನೆ. ಘಟನೆಯ ಸುದ್ದಿ ತಿಳಿದು ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ.

ಕೂಡಲೇ ಸ್ಥಳೀಯರು ಗೋಕುಲ್ ರೋಡ್ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ಕೈಗೊಂಡು ಮೃತ ದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಈ ಕುರಿತು ಗೋಕುಲ್ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button