Breaking NewsLatestರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ಮಣಿಪುರ ವಿಧಾನಸಭೆ ಚುನಾವಣೆ: ಸಂಜೆ 5 ಗಂಟೆವರೆಗೆ ಶೇ.78.03 ಮತದಾನ

ಇಂಫಾಲ್ : ಮಣಿಪುರ ವಿಧಾನಸಭೆಗೆ 12ನೇ ಸಾರ್ವತ್ರಿಕ ಚುನಾವಣೆಯ ಮೊದಲ ಹಂತದ ಮತದಾನ ಸೋಮವಾರ ಮಣಿಪುರದಲ್ಲಿ ಶಾಂತಿಯುತವಾಗಿ ಮತ್ತು ಯಶಸ್ವಿಯಾಗಿ ಮುಕ್ತಾಯಗೊಂಡಿದೆ. 38 ವಿಧಾನಸಭೆ ಕ್ಷೇತ್ರಗಳಿಗೆ ಬೆಳಗ್ಗೆ 7 ಗಂಟೆಯಿಂದದ ಮತದಾನ ಆರಂಭವಾಗಿದ್ದು, ಸಂಜೆವರೆಗೆ ಬಿರುಸಿನ ಮತದಾನ ನಡೆದಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಮತದಾನಕ್ಕೆ ಆಗಮಿಸಿದ್ದರಿಂದ ಕೆಲವು ಮತಗಟ್ಟೆಗಳಲ್ಲಿ ವಿಶೇಷ ದೀಪಗಳ ವ್ಯವಸ್ಥೆಯೊಂದಿಗೆ ಮತದಾನ ಮುಂದುವರಿದಿತ್ತು.

ರಾಜ್ಯದ 6 ಜಿಲ್ಲೆಗಳಲ್ಲಿ ವ್ಯಾಪಿಸಿರುವ 1721 ಮತಗಟ್ಟೆಗಳಲ್ಲಿ ಮತದಾನ ನಡೆಸಲಾಗಿದ್ದು, ಸಂಜೆ 5 ಗಂಟೆವರೆಗೆ ಶೇ.78.03ರಷ್ಟು ಮತದಾನ ದಾಖಲಾಗಿದೆ. ಮೊದಲ ಹಂತದ ಮತದಾನದಲ್ಲಿ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಸೇರಿದಂತೆ ಕಣದಲ್ಲಿದ್ದ 173 ಅಭ್ಯರ್ಥಿಗಳ ಭವಿಷ್ಯ ಇವಿಎಂ ಯಂತ್ರಗಳಲ್ಲಿ ಭದ್ರವಾಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button