Breaking NewsLatestರಾಜ್ಯಸುದ್ದಿ

ಮರಾಠ ಸಮುದಾಯಕ್ಕೆ ಸಚಿವ ಸ್ಥಾನ ಸಿಗಬೇಕು: ರಮೇಶ್ ಜಾರಕಿಹೊಳಿ

ಸಂಪುಟ ವಿಸ್ತರಣೆಯ ಸಚಿವ ಸ್ಥಾನದ ಆಕಾಂಕ್ಷಿಯಲ್ಲಿ ಮುಂಚೂಣಿಯಲ್ಲಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅಥಣಿಯಲ್ಲಿ ನಾಯಕರ ಸಭೆ ನಡೆಸಿದ್ದು, ಶೀಘ್ರದಲ್ಲಿಯೇ ಒಂದೊಳ್ಳೆ ಸುದ್ದಿ ಬರಲಿದೆ ಎಂದಿದ್ದಾರೆ.
ಅಥಣಿಯಲ್ಲಿ ಶಾಸಕ ರಮೇಶ್ ಜಾರಕಿಹೊಳಿ ಹಾಗೂ ಶ್ರೀಮಂತ ಪಾಟೀಲ್ ಮಹತ್ವದ ಸಭೆ ನಡೆಸಿದ್ದು, ಮಂತ್ರಿ ಸ್ಥಾನಕ್ಕಿಂತ ಕ್ಷೇತ್ರ ಅಭಿವೃದ್ಧಿಯಾಗಬೇಕು ಎಂದು ಶ್ರೀಮಂತ ಪಾಟೀಲ್ ಹೇಳಿದ್ದಾರೆ. ಕ್ಷೇತ್ರಕ್ಕೆ ನೀರಾವರಿ ಯೋಜನೆ ಜಾರಿಯಾಗಬೇಕು ಎಂದಿದ್ದಾರೆ. ನಾನು ಪಕ್ಷ ತೆಗೆದುಕೊಳ್ಳುವ ಯಾವುದೇ ನಿರ್ಣಕ್ಕೆ ಬದ್ಧನಿದ್ದೇನೆ ಎಂದರು.
ಈ ಬಾರಿ ಸಂಪುಟದಲ್ಲಿ ಮರಾಠ ಸಮುದಾಯಕ್ಕೆ ಸಚಿವ ಸ್ಥಾನ ಸಿಗಬೇಕು. ಈ ಬಗ್ಗೆ ಪಕ್ಷದ ವೇದಿಕೆಯಲ್ಲಿಯೂ ಮಾತನಾಡಿದ್ದೇನೆ. ಹಾಗಾಗಿ ಅತಿ ಶೀಘ್ರದಲ್ಲಿ ಒಂದೊಳ್ಳೆ ಸುದ್ದಿ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button