Breaking NewsLatestರಾಜ್ಯಸುದ್ದಿ
ರಾಜ್ಯದಲ್ಲಿ ಮಾಸ್ಕ್ ರದ್ದು ಕುರಿತಾಗಿ ಸಮಾಲೋಚನೆ: ಡಾ.ಕೆ.ಸುಧಾಕರ್

ಬೆಂಗಳೂರು: ಕೋವಿಡ್ 19 ಸಾಂಕ್ರಾಮಿಕ ರೋಗ ಕೊಂಚ ಮಟ್ಟಿಗೆ ಕಡಿಮೆಯಾಗಿದೆ. ಹೀಗಾಗಿ ಇಂದು ಸಾಕಷ್ಟು ಮಂದಿ ಮಾಸ್ಕ್ ಧರಿಸುವುದನ್ನು ನಿಲ್ಲಿಸಿಬಿಟ್ಟಿದ್ದಾರೆ. ಆದ್ರೆ ಕೆಲವೊಂದು ಕಡೆಗಳಲ್ಲಿ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಸದ್ಯ ರಾಜ್ಯದಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸುವುದನ್ನು ರದ್ದು ಮಾಡುವ ಬಗ್ಗೆ ಸಮಾಲೋಚನೆ ನಡೆಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್, ಕೆಲವು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸುವುದನ್ನು ರದ್ದು ಮಾಡಿದ್ದಾರೆ. ಆದರೆ ನಮ್ಮ ರಾಜ್ಯದಲ್ಲಿ ಅಂತಹ ಯಾವುದೇ ಆದೇಶ ಮಾಡಿಲ್ಲ. ಈಗಾಗಲೇ ಶೇ.90ರಷ್ಟು ಜನ ಮಾಸ್ಕ್ ಧರಿಸುತ್ತಿಲ್ಲ ಎಂದರು.
ಕೆಲವು ದೇಶಗಳಲ್ಲಿ ಕೋವಿಡ್ 4ನೇ ಅಲೆಯ ಕುರಿತಾಗಿ ಚರ್ಚೆ ನಡೆಯುತ್ತಿದೆ. ಚೀನಾ ಹಾಗೂ ಕೆಲವು ದೇಶಗಳಲ್ಲಿ ಓಮಿಕ್ರಾನ್ ನ ರೂಪಾಂತರ ತಳಿಗಳು ಕಂಡು ಬಂದಿವೆ. ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆಯ ಸಲಹೆ ಸೂಚನೆಗಳನ್ನು ಪರಿಗಣಿಸಲಾಗುವುದು ಎಂದು ಹೇಳಿದ್ದಾರೆ.
