Breaking NewsLatestರಾಷ್ಟ್ರೀಯಸುದ್ದಿ
ಪ್ರಸ್ತುತ ಪರಿಸ್ಥಿತಿಯಲ್ಲಿ ಮಾಸ್ಕ್ ಧರಿಸುವಿಕೆ ಅಗತ್ಯವಿಲ್ಲ

ನವದೆಹಲಿ: ಕಳೆದ ಎರಡು ವರ್ಷಗಳಿಂದ ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂಬ ನಿಯಮ ಜಾರಿಯಲ್ಲಿತ್ತು. ಆದರೆ ಪ್ರಸ್ತುತ ಪರಿಸ್ಥಿತಿಯಲ್ಲಿ ಕಡ್ಡಾಯ ಮಾಸ್ಕ್ ನಿಯಮವನ್ನು ಸಡಿಲಗೊಳಿಸಬಹುದು ಎಂದು ಹಲವು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.
ಸದ್ಯದ ಮಟ್ಟಿಗೆ ಕಡ್ಡಾಯ ಮಾಸ್ಕ್ ಧರಿಸುವುದನ್ನು ಸಡಿಲಗೊಳಿಸುವುದು ಉತ್ತಮ. ಒಂದು ವೇಳೆ ಮತ್ತೊಮ್ಮೆ ಕೋವಿಡ್ ಅಲೆ ಬಂದರೆ ಆಗ ಮತ್ತೆ ಕಡ್ಡಾಯ ಮಾಸ್ಕ್ ನಿಯಮವನ್ನು ಜಾರಿಗೊಳಿಸಬೇಕು ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.
ಕಳೆದ ಎರಡು ವರ್ಷಗಳಲ್ಲಿ ದೇಶದಲ್ಲಿ ಕೋವಿಡ್ ಅಬ್ಬರವಿತ್ತು. ಆದ್ರೆ ಈಗ ಅತಿ ಕಡಿಮೆ ಕೋವಿಡ್ ಪ್ರಕರಣಗಳು ವರದಿಯಾಗುತ್ತಿವೆ. ಈಗಾಗಲೇ ದೆಹಲಿ, ಮಹಾರಾಷ್ಟ್ರ, ಪಂಜಾಬ್ ಹಾಗೂ ಹರಿಯಾಣಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವ ನಿಯಮವನ್ನು ರದ್ದುಗೊಳಿಸಲಾಗಿದೆ.
ಕಡ್ಡಾಯ ಮಾಸ್ಕ್ ಧರಿಸುವ ನಿಯಮಕ್ಕಿಂತ ಜನರಿಗೆ ಬೂಸ್ಟರ್ ಡೋಸ್ ನೀಡುವ ಕಾರ್ಯದತ್ತ ಹೆಚ್ಚಿನ ಗಮನ ವಹಿಸಬೇಕು ಎಂದು ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಲಕ್ಷ್ಮೀನಾರಾಯಣ್ ಹೇಳಿದ್ದಾರೆ.
