Breaking NewsLatestರಾಷ್ಟ್ರೀಯಸುದ್ದಿ

ಜಮ್ಮು-ಕಾಶ್ಮೀರದ ಜಾಮಿಯಾ ಮಸೀದಿಯಲ್ಲಿ ಭಾರೀ ಬೆಂಕಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದ್ರಾಸ್‌ನಲ್ಲಿರುವ ಜಾಮಿಯಾ ಮಸೀದಿಯಲ್ಲಿ ಬುಧವಾರ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಭಾರತೀಯ ಸೇನೆ, ಪೊಲೀಸ್ ಮತ್ತು ಅಗ್ನಿಶಾಮಕ ಹಾಗೂ ತುರ್ತು ವಿಭಾಗದ ಸಹಾಯದಿಂದ ಬೆಂಕಿಯನ್ನು ನಂದಿಸಲಾಗಿದೆ.

ಜಾಮಿಯಾ ಮಸೀದಿಯ ಉಸ್ತುವಾರಿಯೊಬ್ಬರು ಘಟನೆಯ ಬಗ್ಗೆ ಮಾತನಾಡಿ, “ದ್ರಾಸ್‌ನ ಅತ್ಯಂತ ಹಳೆಯ ಮಸೀದಿಯೊಂದರಲ್ಲಿ ಬೆಂಕಿಯ ಘಟನೆಯ ಬಗ್ಗೆ ಕೇಳಿ ಬೇಸರವಾಯಿತು.

ದ್ರಾಸ್ ಸೂಕ್ಷ್ಮ ಪ್ರದೇಶವಾಗಿದೆ. ಆದರೆ ದುರದೃಷ್ಟಕರ ಸಂಗತಿಯೆಂದರೆ ಒಂದೇ ಒಂದು ಅಗ್ನಿಶಾಮಕ ಸೇವೆ ಇಲ್ಲಿಲ್ಲ. ಹಿಂದೆಯೂ ಸಹ ಇಂತಹ ಘಟನೆಗಳು ನಡೆದಿವೆ. ಆದರೆ ಕೇಂದ್ರಾಡಳಿತ ಪ್ರದೇಶದ ಆಡಳಿತವು ಯಾವ ಕ್ರಮವೂ ಕೈಗೊಂಡಿಲ್ಲ” ಎಂದಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button