Breaking NewsLatestರಾಜಕೀಯರಾಷ್ಟ್ರೀಯ
ಕಾಶ್ಮೀರದ ಸಮಸ್ಯೆಗಳು ಪರಿಹಾರವಾಗಿವೆ ಎಂಬುದು ಸುಳ್ಳು ವಾದ: ಮೆಹಬೂಬಾ ಮುಫ್ತಿ

ನವದೆಹಲಿ: ಜಮ್ಮು-ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾದ ನಂತರ ಸಮಸ್ಯೆಗಳೆಲ್ಲಾ ಪರಿಹಾರವಾಗಿ ತಹಬದಿಗೆ ತರಲಾಗಿದೆ ಎಂದು ಜನರನ್ನು ನಂಬಿಸಲು ಹೊರಟಿರುವ ಕೇಂದ್ರ ಸರ್ಕಾರದ ವಾದವು ಸುಳ್ಳು ಎಂಬುದು ಈಗ ಜಗಜ್ಜಾಹೀರಾಗುತ್ತಿದೆ ಎಂದು ಮಾಜಿ ಸಿಎಂ ಮೆಹಬೂಬಾ ಮುಫ್ತಿ ಮಂಗಳವಾರ ಟ್ವೀಟ್ ಮಾಡಿದ್ದಾರೆ.
ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಶಾ ಗಿಲಾನಿ ಸಾವಿನ ನಂತರ ಕಾಶ್ಮೀರದಲ್ಲಿ ಭದ್ರತಾ ನಿರ್ಬಂಧಗಳನ್ನು ವಿಧಿಸಿದ ಮೇಲೆ ಪಿಡಿಪಿ ಮುಖ್ಯಸ್ಥೆ ಮುಫ್ತಿ ಈ ಆರೋಪ ಮಾಡಿದ್ದಾರೆ.
ಅಫ್ಘಾನ್ ಜನರ ಹಕ್ಕುಗಳ ಬಗ್ಗೆ ಭಾರತ ಸರ್ಕಾರ ಕಳವಳ ವ್ಯಕ್ತಪಡಿಸುತ್ತದೆ. ಆದರೆ ಉದ್ದೇಶಪೂರ್ವಕವಾಗಿ ಕಾಶ್ಮೀರಿಗಳ ಹಕ್ಕುಗಳನ್ನು ನಿರಾಕರಿಸುತ್ತಿದೆ. ನನ್ನನ್ನೇ ಗೃಹಬಂಧನದಲ್ಲಿ ಇರಿಸಿದ್ದಾರೆ. ಕಾಶ್ಮೀರದಲ್ಲಿ ಪರಿಸ್ಥಿತಿ ಸಾಮಾನ್ಯವಾಗಿಲ್ಲ ಎಂಬುದು ಇದರಿಂದಲೇ ತಿಳಿಯುತ್ತದೆ ಎಂದು ಟೀಕಿಸಿದ್ದಾರೆ.
