ಸಿಎಂ ಎಲ್ಲಾ ವರ್ಗಗಳ ಪರವಾಗಿ ಉತ್ತಮ ಬಜೆಟ್ ಮಂಡಿಸಲಿದ್ದಾರೆ: ಆರ್. ಅಶೋಕ್

ಮೈಸೂರು ; ಸಿಎಂ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ರೈತರು, ಬಡವರು ಹಾಗೂ ಮಧ್ಯಮ ವರ್ಗದ ಪರವಾದ ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.
ಜಿಲ್ಲೆಯ ಟಿ.ನರಸೀಪುರ ಬೂತ್ ಅಧ್ಯಕ್ಷರ ಸಮಾವೇಶದಲ್ಲಿ ಭಾಗಿಯಾಗಿ ನಂತರ ಮಾತನಾಡಿದ ಅವರು, ಬಜೆಟ್ನಲ್ಲಿ ಮಂಡನೆಯಾದ ಯೋಜನೆಗಳನ್ನು ಜನಸಾಮಾನ್ಯರ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದರು.
ಉಕ್ರೇನ್ ಮತ್ತು ರಷ್ಯಾ ನಡುವಿವ ಯುದ್ಧ ಸಂಬಂಧ ಪ್ರತಿಕ್ರಿಯಿಸಿ, ಉಕ್ರೇನ್ ದೇಶದಲ್ಲಿರುವ ವಿವಿಧ ರಾಷ್ಟ್ರಗಳ ಜನರನ್ನು ಕರೆತರುವಲ್ಲಿ ಇತರೆ ದೇಶಗಳು ಹಿಂದೆ ಸರಿದಿದೆ. ಆದರೆ, ಭಾರತ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರು ನಾಲ್ಕು ಸಚಿವರನ್ನು ಉಕ್ರೇನ್ ದೇಶಕ್ಕೆ ಕಳುಹಿಸಿಕೊಟ್ಟಿದ್ದಾರೆ. ಉಕ್ರೇನ್‌ನಲ್ಲಿರುವ ಭಾರತೀಯರಿಗೆ ಮನೋಸ್ಥೈರ್ಯ ತುಂಬಿ 17ಸಾವಿರ ಭಾರತೀಯರನ್ನು ಭಾರತಕ್ಕೆ ಕರೆ ತರುವ ಉದ್ದೇಶವಿದೆ ಎಂದರು.
ಕಾಂಗ್ರೆಸ್ ರೈತರ ಏಳಿಗೆ ಬಯಸುತ್ತಿಲ್ಲ :
ಕಾಂಗ್ರೆಸ್ನ ಮೇಕೆದಾಟು ಪಾದಯಾತ್ರೆ ವಿಚಾರವಾಗಿ ಮಾತನಾಡುತ್ತಾ, ಕಾಂಗ್ರೆಸ್ ನಾಯಕರು ರಾಜ್ಯದ ರೈತರ ಏಳಿಗೆ ಬಯಸುತ್ತಿಲ್ಲ. ಮೋಜು ಮಸ್ತಿ ಮಾಡುವುದಕ್ಕೆ ಪಾದಯಾತ್ರೆ ಮಾಡುತ್ತಿದ್ದಾರೆ. ಆ ಪಕ್ಷದ ನಾಯಕರ ನಡವಳಿಕೆ ನೋಡಿ ರಾಜ್ಯದ ಜನ ಬೇಸತ್ತಿದ್ದಾರೆ ಎಂದು ಟೀಕಿಸಿದರು.
ನಾಳೆ ರಾಜ್ಯ ಬಜೆಟ್ ಮಂಡನೆ ಆಗುತ್ತಿದೆ. ಈ ಬಜೆಟ್ ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಧ್ಯಾಹ್ನ 12.30ಕ್ಕೆ ಬಜೆಟ್
