Breaking NewsLatestರಾಜ್ಯಸುದ್ದಿ
ಬಂಧನದ ಭೀತಿಯಲ್ಲಿ ವಸತಿ ಸಚಿವ ವಿ.ಸೋಮಣ್ಣ!

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಪ್ರಕರಣದಲ್ಲಿ ವಸತಿ ಸಚಿವ ವಿ.ಸೋಮಣ್ಣಗೆ ಬಂಧನದ ಭೀತಿ ಎದುರಾಗಿದ್ದು, ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನಿನ ಮೊರೆ ಹೋಗಿದ್ದಾರೆ.
ಸೋಮಣ್ಣ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ಸಂಬಂಧ ಆಕ್ಷೇಪಣೆಗಳಿದ್ದರೆ ಸಲ್ಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಮೂಲ ದೂರುದಾರರಿಗೆ ಆದೇಶ ನೀಡಿದೆ.
ಸೋಮಣ್ಣ ಜಾಮೀನು ಅರ್ಜಿ ವಿಚಾರಣೆ ನ್ಯಾಯಾಧೀಶ ಬಿ.ಜಯಂತ್ ಕುಮಾರ್ ಮುಂದೆ ಬಂದಿದೆ. ಕೆಲ ಕಾಲ ವಾದ ಆಲಿಸಿದ ಬಿ. ಜಯಂತ್ ಕುಮಾರ್ ಬಳಿಕ ದೂರುದಾರರಾದ ರಾಮಕೃಷ್ಣಗೆ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿ ವಿಚಾರಣೆಯನ್ನು ಮಾ.30ಕ್ಕೆ ಮುಂದೂಡಿದ್ದಾರೆ.
ಬೆಂಗಳೂರು, ಮಂಗಳೂರು ಮತ್ತು ಮೈಸೂರಿನಲ್ಲಿ ಸಾಕಷ್ಟು ಅಕ್ರಮ ಸ್ಥಿರಾಸ್ತಿ ಹೊಂದಿದ್ದಾರೆ. ಕಡಿಮೆ ದರದಲ್ಲಿ ಜಮೀನು ಖರೀದಿಸಿದ್ದಾರೆ. ಎಸಿಬಿ ತನಿಖೆಯಲ್ಲಿ ಕೇವಲ ಅವರ ವೈಯಕ್ತಿಕ ಮತ್ತು ಖಾಸಗಿ ಸಾಲಗಳ ಬಗ್ಗೆ ತನಿಖೆ ನಡೆಸಲಾಗಿದೆ ಎಂದು ಮೂಡಲಪಾಳ್ಯದ ನಿವಾಸಿ ರಾಮಕೃಷ್ಣ ಎಂಬುವವರು ಸೋಮಣ್ಣ ವಿರುದ್ಧ ದೂರು ದಾಖಲಿಸಿದ್ದಾರೆ.
