Breaking NewsLatestಕ್ರೈಂಜಿಲ್ಲಾ ಸುದ್ದಿದಾವಣಗೆರೆ

ಲಾರಿ ಚಕ್ರದಡಿ ಸಿಲುಕಿ ತಾಯಿ, ಮಗಳ ದಾರುಣ ಸಾವು

ದಾವಣಗೆರೆ: ಬೈಕ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ತಾಯಿ ಮತ್ತು ಮಗಳು ಮೃತಪಟ್ಟ ದಾರುಣ ಘಟನೆ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಬರುವ ಕುಂದುವಾಡ ಗ್ರಾಮದ ಬಳಿ ನಡೆದಿದೆ.

ಶಿವಮೊಗ್ಗ ಮೂಲದ ಒಂದೇ ಕುಟುಂಬದ ಮೂವರು ದಾವಣಗೆರೆಗೆ ಬರುವ ವೇಳೆ ಈ ಘಟನೆ ನಡೆದಿದೆ. ತಾಯಿ, ಮಗು ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ.

ಬೈಕ್ ಸ್ಕಿಡ್ ಆಗಿ ಲಾರಿ ಚಕ್ರಕ್ಕೆ ಬಿದ್ದ ಪರಿಣಾಮ ಈ ದುರ್ಘಟನೆ ನಡೆದಿದ್ದು, ಅಪಘಾತ ನಡೆದ ಬಳಿಕ ಸ್ಥಳೀಯ ಗ್ರಾಮಸ್ಥರು ರಸ್ತೆ ತಡೆದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು‌. ಹೈವೇ ರಸ್ತೆಯ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿರುವ ಹಿನ್ನೆಲೆಯಲ್ಲಿ

ಅಪಘಾತ ನಡೆದಿದೆ. ಇದಕ್ಕೆ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಕಾಮಗಾರಿಯನ್ನು ಬೇಗನೇ ಮಾಡಿ ಮುಗಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ದಾವಣಗೆರೆ ಉತ್ತರ ಸಂಚಾರಿ ಪೋಲಿಸ್  ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.‌

Spread the love

Related Articles

Leave a Reply

Your email address will not be published. Required fields are marked *

Back to top button