Breaking NewsLatestಜಿಲ್ಲಾ ಸುದ್ದಿಮೈಸೂರುರಾಜಕೀಯ

ರಾಜಕೀಯ ದುರುದ್ದೇಶದಿಂದ ಅಣ್ಣಾಮಲೈ ಉಪವಾಸ ಮಾಡುತ್ತಿದ್ದಾರೆ: ಸಂಸದ ಪ್ರತಾಪ್​ ಸಿಂಹ

ಮೈಸೂರು : ಎರಡೂ ರಾಜ್ಯಗಳಿಗೆ ಯಾವುದೇ ರೀತಿಯ ತೊಂದರೆಯಾಗದಿದ್ದರೂ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ  ಅಣ್ಣಾಮಲೈ ಅವರು ಮೇಕೆದಾಟು ಯೋಜನೆಯನ್ನು ವಿರೋಧಿಸಿ ಉಪವಾಸ ಮಾಡುತ್ತಿದ್ದಾರೆ. ಇದರ ಹಿಂದೆ ರಾಜಕೀಯ ದುರುದ್ದೇಶ ಇದೆ ಹೊರತು ಬೇರೇನು ಇಲ್ಲ ಎಂದು ಸಂಸದ ಪ್ರತಾಪ್ ಸಿಂಹ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೈಸೂರಿನ ಧನ್ವಂತರಿ ರಸ್ತೆಯಲ್ಲಿ ಇರುವ ಕಚೇರಿಯಲ್ಲಿ ಲಸಿಕಾ ಅಭಿಯಾನಕ್ಕೆ ಸಂಸದ ಪ್ರತಾಪ್ ಸಿಂಹ ಚಾಲನೆ ನೀಡಿದ ನಂತರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆ ಬಗ್ಗೆ ಕರ್ನಾಟಕದಲ್ಲಿ ಹೆಚ್ಚು ಚರ್ಚೆ ಮಾಡುವ ಅಗತ್ಯವಿಲ್ಲ. ಎಂದರು.

ರಾಜ್ಯದ ರಾಜಕೀಯ ಪಕ್ಷಗಳ ಮುಖಂಡರು ಈ ಬಗ್ಗೆ ಹೇಳಿಕೆ ನೀಡುವುದನ್ನು ಬಿಟ್ಟು, ಕೇಂದ್ರ ಸರ್ಕಾರದಿಂದ ಯೋಜನಾ ವರದಿ ತಯಾರಿಸಿ, ಅದಕ್ಕೆ ಆಡಳಿತಾತ್ಮಕ ಒಪ್ಪಿಗೆ ಪಡೆದುಕೊಳ್ಳುವತ್ತ ಹೆಚ್ಚಿನ ಗಮನಹರಿಸುವುದು ಸೂಕ್ತ ವಾಗುತ್ತದೆ ಎಂದು ಸಲಹೆ ನೀಡಿದ್ದಾರೆ.

 

Spread the love

Related Articles

Leave a Reply

Your email address will not be published. Required fields are marked *

Back to top button