Breaking NewsLatestರಾಷ್ಟ್ರೀಯಸುದ್ದಿ

ಮುಲಾಯಂ ಸಿಂಗ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ

ದೆಹಲಿ: ಸಮಾಜವಾದಿ ಪಕ್ಷದ ಸಂಸ್ಥಾಪಕ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

ಅವರಿಗೆ ಜೀವರಕ್ಷಕ ಔಷಧಿಗಳನ್ನು ನೀಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆಯ ವೈದ್ಯರು ಭಾನುವಾರ ತಿಳಿಸಿದ್ದಾರೆ. ಗುರುಗ್ರಾಮ್‌ನ ಮೇದಾಂತ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಸಂಜೀವ್ ಗುಪ್ತಾ ಅವರು ಆರೋಗ್ಯದ ಕುರಿತು ಮಾಹಿತಿ ನೀಡುತ್ತಾ ಸಮಗ್ರ ತಜ್ಞರ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿದೆ ಎಂದಿದ್ದಾರೆ.

ಈ ಬುಲೆಟಿನ್ ಅನ್ನು ಸಮಾಜವಾದಿ ಪಕ್ಷ ತಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದೆ. ಮುಲಾಯಂ ಯಾದವ್ (82) ಆಗಸ್ಟ್ 22 ರಿಂದ ಮೇದಾಂತದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಈ ಹಿಂದೆ ಜುಲೈನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಮೂಲಗಳು ತಿಳಿಸಿವೆ.

Related Articles

Leave a Reply

Your email address will not be published. Required fields are marked *

Back to top button