ಅಂಜನಾದ್ರಿ ಬೆಟ್ಟದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ಬೇಡ!

ಕೊಪ್ಪಳ: ಅಂಜನಾದ್ರಿಯಲ್ಲಿ ಈ ಭಾರಿ ಹಿಂದೂಗಳನ್ನು ಹೊರತುಪಡಿಸಿ ವ್ಯಾಪಾರ ವಹಿವಾಟು ನೆಡಸದಂತೆ ಜಿಲ್ಲಾಧಿಕಾರಿಗೆ ಹಿಂದೂ ಜಾಗರಾಣ ವೇದಿಕೆ ಮನವಿ ಮಾಡಿದೆ.
ಡಿಸೆಂಬರ್ 5 ರಂದು ಹನುಮ ಜಯಂತಿ ಇರುವುದರಿಂದ ಲಕ್ಷಾಂತರ ಸಂಖ್ಯೆಯಲ್ಲಿ ಹನುಮ ಮಾಲಾಧಾರಿಗಳು ಅಂಜನಾದ್ರಿಗೆ ಬರುತ್ತಿದ್ದಾರೆ. ಹೀಗಾಗಿ ಹಿಂದೂಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಿ ಎಂದು ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಂಚಾಲಕ ಸಂಜೀವ್ ಮನವಿ ಮಾಡಿದ್ದಾರೆ.
ಇನ್ನು ಜಿಲ್ಲಾಡಳಿತ ಅಂಜನಾದ್ರಿಯಲ್ಲಿ ಸಕಲ ಸಿದ್ದತೆಯನ್ನು ಮಾಡಿಕೊಳ್ಳುತ್ತಿದೆ. ಈ ಮಧ್ಯೆ ಧರ್ಮ ಸಂಘರ್ಷದಿಂದ ಜಿಲ್ಲಾಡಳಿತಕ್ಕೆ ತಲೆನೋವು ಶುರುವಾಗಿದೆ. ಶಾಂತಿಯುತವಾಗಿ ಮತ್ತು ಅದ್ದೂರಿಯಾಗಿ ಹನುಮ ಮಾಲಾಧಾರಿಗಳ ಕಾರ್ಯಕ್ರಮವನ್ನು ಮಾಡಬೇಕಿಂದಿದ್ದ ಜಿಲ್ಲಾಡಳಿತಕ್ಕೆ ಹಿಂದೂ ಸಂಘಟನೆಗಳು ಹಿಡಿದಿರುವ ಹೊಸ ಸವಾಲಿಗೆ ಆಂತಕ ಎದುರಾಗಿದೆ.
ಈ ಹಿಂದೆ ಕೂಡ ಹಿಂದೂ ಕಾರ್ಯಕರ್ತ ಮಧುಗಿರಿ ಮೋದಿ ಹಾಗೂ ಶ್ರೀರಾಮಸೇನೆ ವಿಭಾಗಿಯ ಅಧ್ಯಕ್ಷ ಸಂಜೀವ್ ಮರಡಿ ಕೂಡ ಹಿಂದೂ ಹೊರತುಪಡಿಸಿ ಬೇರೆ ಯಾರು ಕೂಡ ವ್ಯಾಪಾರ ಮಾಡುವಂತಿಲ್ಲ ಎಂದು ಎಚ್ಚರಿಕೆ ನೀಡಿದ್ದರು,. ಇದೀಗ ಹಿಂದೂ ಜಾಗರಣವೇದಿಕೆ ಜಿಲ್ಲಾ ಸಂಚಾಲಕ ಸಂಜೀವ್ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುವ ಮೂಲಕ ಮುಸ್ಲಿಂ, ಕ್ರಿಶ್ಚಿಯನ್, ವ್ಯಾಪಾರ ನಿಷೇಧ ಮಾಡಬೇಕು. ವ್ಯಾಪಾರ ವಹಿವಾಟು ಹೆಸರಿನಲ್ಲಿ ಮುಸ್ಲಿಂ ಉಗ್ರರ ಪ್ರವೇಶವಾಗುತ್ತಿದೆ. ಹಿಂದೂ ಧಾರ್ಮಿಕ ಸ್ಥಳಗಳ ಮಾಹಿತಿ ಕಲೆ ಹಾಕಲಾಗುತ್ತದೆ. ಹೀಗಾಗಿ ಅಂಜನಾದ್ರಿ ಬೆಟ್ಟದಲ್ಲಿ ಅವರಿಗೆ ಅವಕಾಶ ಕೊಡಬೇಡಿ ಎಂದು ಮನವಿ ಮಾಡಿದ್ದು, ನಾಮಫಲಕ ಕೂಡ ಹಾಕಿದ್ದಾರೆ.
