Breaking NewsLatest

ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ಮೈಸೂರು ವಿದ್ಯಾರ್ಥಿ ಆಯ್ಕೆ

ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 1 ರಂದು ನಡೆಸಲಿರುವ ಪರೀಕ್ಷಾ ಪೇ ಚರ್ಚಾ 2022ರ ಕಾರ್ಯಕ್ರಮದಲ್ಲಿ ಮೈಸೂರು ವಿದ್ಯಾರ್ಥಿ ಭಾಗವಹಿಸಲಿದ್ದಾರೆ. ಪರೀಕ್ಷಾ ಪೇ ಚರ್ಚಾ ಐದನೇ ಆವೃತ್ತಿಗೆ ಭಾಗವಹಿಸುತ್ತಿರುವ ಕರ್ನಾಟಕದ ಏಕೈಕ ವಿದ್ಯಾರ್ಥಿ ಎಂಬ ಹೆಗ್ಗಳಿಕೆ ಈ ವಿದ್ಯಾರ್ಥಿಯದ್ದಾಗಿದೆ.

‘ಪರೀಕ್ಷಾ ಪೇ ಚರ್ಚಾ’ ಐದನೇ ಆವೃತ್ತಿಯ ಸಂವಾದದಲ್ಲಿ ಮೋದಿ ವಿದ್ಯಾರ್ಥಿಗಳು ಮುಂಬರುವ ಬೋರ್ಡ್ ಪರೀಕ್ಷೆ ಮತ್ತು ಪ್ರವೇಶ ಪರೀಕ್ಷೆಯನ್ನ ತೆಗೆದುಕೊಳ್ಳುವ ಹಾದಿಯಲ್ಲಿರುವ ಮಕ್ಕಳ ಆತಂಕವನ್ನು ದೂರ ಮಾಡುವ ಕುರಿತಾಗಿ ಮಾತನಾಡಲಿದ್ದಾರೆ. ಪರೀಕ್ಷಾ ಪೇ ಚರ್ಚಾ 2022 ರ ಐದನೇ ಆವೃತ್ತಿಯು ನವದೆಹಲಿಯ ತಾಲ್ಕೋಟ್ರಾ ಸ್ಟೇಡಿಯಂನಲ್ಲಿ ನಡೆಯಲಿದ್ದು, ಅನೇಕ ರಾಜ್ಯದ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.

ಪರೀಕ್ಷಾ ಪೇ ಚರ್ಚಾ ಐದನೇ ಆವೃತ್ತಿ ಕಾರ್ಯಕ್ರಮಕ್ಕೆ ಎಂ.ಬಿ. ಜವಾಹರ್ ನವೋದಯ ವಿದ್ಯಾಲಯದ ವಿದ್ಯಾರ್ಥಿ ತರುಣ್  ಆಯ್ಕೆಯಾಗಿದ್ದಾರೆ. ಈ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಕರ್ನಾಟಕದ ಏಕೈಕ ವಿದ್ಯಾರ್ಥಿಯಾಗಿದ್ದಾರೆ.  ದೇಶದಾದ್ಯಂತ ವಿದ್ಯಾರ್ಥಿಗಳೊಂದಿಗೆ ಏ.1ರಂದು ನಡೆಸಲಿರುವ ಪರೀಕ್ಷಾ ಪೇ ಚರ್ಚಾ  ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭಾಗಿಯಾಗಲಿದ್ದು  ವರ್ಚುವಲ್ ಮೂಲಕವೇ  ‘ತರಗತಿಯಲ್ಲಿ ಡಿಜಿಟಲ್ ಸಂವಾದ’ ಎಂಬ ವಿಷಯದ ಕುರಿತು ಮೋದಿ ವಿದ್ಯಾರ್ಥಿಗಳೊಂದಿಗೆ ಮಾತನಾಡಲಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button