Breaking NewsLatestಜಿಲ್ಲಾ ಸುದ್ದಿದಾವಣಗೆರೆರಾಜಕೀಯರಾಜ್ಯಸುದ್ದಿ

ನ್ಯಾ. ನಾಗಮೋಹನ್ ದಾಸ್ ವರದಿ ಜಾರಿಗೆ ಆಗ್ರಹ: ಬಿಜೆಪಿಯವರಿಂದ ಸಾಮರಸ್ಯ ಬದುಕಿಗೆ ಬೆಂಕಿ ಎಂದ ಎಸ್.ಎಸ್.ಎಂ

ದಾವಣಗೆರೆ: ನ್ಯಾ. ನಾಗಮೋಹನ್ ದಾಸ್ ಅವರು ಪರಿಶಿಷ್ಟ ಪಂಗಡಗಳ ಕುರಿತು ನೀಡಿರುವ ವರದಿಯನ್ನು ಶೀಘ್ರದಲ್ಲೇ ಜಾರಿಗೆ ತರುವಂತೆ ಮಾಜಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. ಬೆಂಗಳೂರಿನಲ್ಲಿ ಹಲವು ದಿನಗಳಿಂದ ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಿಸುವಂತೆ ಒತ್ತಾಯಿಸಿ ಪ್ರತಿಭಟನೆ ಹಮ್ಮಿಕೊಂಡಿರುವ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಪುರಿ ಶ್ರೀಗಳ ಅಮರಣಾಂತ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿ ಹೋರಾಟಕ್ಕೆ ಬೆಂಬಲ ನೀಡಿ ಅವರು ಮಾತನಾಡಿದರು.

ಕಳೆದ 2-3 ವರ್ಷಗಳ ಹಿಂದೆಯೇ ನ್ಯಾ.ನಾಗಮೋಹನ್ ದಾಸ್ ಅವರು ರಾಜ್ಯ ಸರ್ಕಾರಕ್ಕೆ ವರದಿ ನೀಡಿದ್ದರೂ ಸಹ ಬಿಜೆಪಿಯವರಿಗೆ ಇಚ್ಚಾಶಕ್ತಿ ಕೊರತೆಯಿಂದಲೋ ಅಥವಾ ಪರಿಶಿಷ್ಟ ಪಂಗಡಗಳ ಬಗೆಗಿನ ತಾತ್ಸಾರ ಮನೋಭಾವದಿಂದಲೋ ವರದಿಯನ್ನು ಜಾರಿಗೆ ತರಲು ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂದು ದೂರಿದರು.

ನ್ಯಾ. ನಾಗಮೋಹನ್ ದಾಸ್ ವರದಿಯನ್ನು ಜಾರಿಗೆ ತರುವಂತೆ ಶ್ರೀಗಳು ಹಲವು ದಿನಗಳಿಂದ ಅಮರಣಾಂತ ಸತ್ಯಾಗ್ರಹ ನಡೆಸುತ್ತಿದ್ದರೂ ಸಹ ಸರ್ಕಾರ ಕಂಡುಕಾಣದಂತೆ ಇರುವುದನ್ನು ನೋಡಿದರೆ ಪರಿಶಿಷ್ಟ ಪಂಗಡಗಳ ಬಗ್ಗೆ ರಾಜ್ಯ ಬಿಜೆಪಿ ಸರ್ಕಾರಕ್ಕೆ ತಾತ್ಸಾರ ಮನೋಭಾವನೇ ಇದೆ ಎಂಬುದು ತೋರಿಸುತ್ತಿದೆ. ಸ್ವಾಮೀಜಿಯವರು ಕೇವಲ ತಮಗೆ ಮಾತ್ರ ಮೀಸಲಾತಿ ಕೇಳುತ್ತಿಲ್ಲ.

ರಾಜ್ಯದ ಉದ್ದಗಲಕ್ಕೂ ಇರುವ ವಾಲ್ಮೀಕಿ ಸಮಾಜ ಸೇರಿದಂತೆ ಪರಿಶಿಷ್ಟ ಪಂಗಡಗಳ ವಿವಿಧ ಸಮಾಜಕ್ಕೆ ಮೀಸಲಾತಿಗೆ ಆಗ್ರಹಿಸುತ್ತಿದ್ದು ಇದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ತಿಳಿಸಿದರು. ಈ ಹಿಂದೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಓಬಿಸಿ ಸೇರಿದಂತೆ ಎಲ್ಲಾ ವರ್ಗದವರಿಗೂ ಅನುಕೂಲವಾಗುವಂತೆ ಕಾರ್ಯಕ್ರಮಗಳನ್ನು ರೂಪಿಸಿ ಸಾಮಾಜಿಕ ನ್ಯಾಯ ಕಲ್ಪಿಸಲಾಗಿತ್ತು.

ಆದರೆ ಇಂದು ಬಿಜೆಪಿ ಸರ್ಕಾರ ಜಾತಿ-ಧರ್ಮಗಳ ಮಧ್ಯೆ ವಿಷಬೀಜ ಬಿತ್ತಿ ಸಾಮರಸ್ಯ ಕದಡುತ್ತಿದ್ದು, ಇದರಿಂದ ಭವಿಷ್ಯದಲ್ಲಿ ರಾಜ್ಯ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ ಅವರು ಪರಿಶಿಷ್ಟ ಪಂಗಡಗಳ ಸಮುದಾಯದ ಎಲ್ಲಾ ಸಮಾಜಗಳ ಹೋರಾಟ ನಡೆಸಿ ತಮ್ಮ ಹಕ್ಕನ್ನು ಪಡೆಯಬೇಕೆಂದು ಆಗ್ರಹಿಸಿದರು.

Spread the love

Related Articles

Leave a Reply

Your email address will not be published. Required fields are marked *

Back to top button