Breaking NewsLatestಜಿಲ್ಲಾ ಸುದ್ದಿಬೆಂಗಳೂರುರಾಜ್ಯಸುದ್ದಿ
ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ `ರಾಷ್ಟ್ರೀಯ ಶಿಕ್ಷಣ: ಬಿ.ಸಿ.ನಾಗೇಶ್

ಬೆಂಗಳೂರು : ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ 2020 (NEP) ಅನ್ನು ಸರ್ಕಾರ ಜಾರಿಗೆ ತರಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಆಯೋಜಿಸಿದ್ದ ರಾಜ್ಯಮಟ್ಟದ ಶೈಕ್ಷಣಿಕ ಕಾರ್ಯಾಗಾರ ಮತ್ತು ‘ಅಕ್ಷರ ಸಿರಿ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ 2020 (NEP) ಅನ್ನು ಸರ್ಕಾರ ಜಾರಿಗೆ ತರಲಿದೆ. 75 ವರ್ಷಗಳ ನಂತರ ಸ್ವಾವಲಂಬಿ ಸಮಾಜಕ್ಕಾಗಿ ಎನ್‌ಇಪಿಯನ್ನು ಪರಿಚಯಿಸಲಾಗುವುದು ಎಂದು ಹೇಳಿದರು.
ಸಾಮಾಜಿಕ ಬದಲಾವಣೆ ಇಂದಿನ ಅಗತ್ಯವಾಗಿದೆ. ಎನ್‌ಇಪಿ ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಮೊಘಲರು ಮತ್ತು ಬ್ರಿಟಿಷರು ಪರಿಚಯಿಸಿದ ವ್ಯವಸ್ಥೆಗಳು, ನೀತಿಗಳು ಮತ್ತು ಆಡಳಿತದ ವಿರುದ್ಧ ಭಾರತೀಯರು ಹೋರಾಡಿದ್ದರು ಎಂದು ತಿಳಿಸಿದ್ದಾರೆ.
