Breaking NewsLatestಕ್ರೈಂಚಿಕ್ಕಮಗಳೂರುಜಿಲ್ಲಾ ಸುದ್ದಿರಾಜ್ಯಸುದ್ದಿ
ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಕಾರು: ನಾಲ್ವರಿಗೆ ಗಾಯ

ಚಿಕ್ಕಮಗಳೂರು: ಕಾರು ಚಾಲಕನ ನಿಯಂತ್ರಣ ತಪ್ಪಿ, ಚಾರ್ಮುಡಿ ಘಾಟ್ ನ ಕಂದಕಕ್ಕೆ ಕಾರು ಉರುಳಿ ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಚಾರ್ಮಾಡಿ ಘಾಟ್ ಮೊದಲನೆ ತಿರುವಿನಲ್ಲಿ ಈ ಘಟನೆ ನಡೆದಿದ್ದು, ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.
ಈ ಘಟನೆ ನಡೆದ ಕೂಡಲೇ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಹಾಗೂ ಚಾರ್ಮಾಡಿ ಹಸನಬ್ಬ ಅವರ ತಂಡ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಪ್ರಸ್ತುತ ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಚಿಕ್ಕಮಗಳೂರು ಹಾಗೂ ದಕ್ಷಿಣಕನ್ನಡ ಜಿಲ್ಲೆಯ ಕೊಂಡಿಯಾಗಿರುವ ಚಾರ್ಮಾಡಿ ಘಾಟ್ ಕಿರಿದಾದ ತಿರುವುಗಳನ್ನು ಹೊಂದಿದ್ದು ಸ್ವಲ್ಪ ಆಯ ತಪ್ಪಿದರು ಕೂಡ ಅಪಾಯ ಕಟ್ಟಿಟ್ಟ ಬುತ್ತಿಯಾಗಿದೆ. ಈ ಮಾರ್ಗದಲ್ಲಿ ಸಂಚಾರ ಮಾಡುವ ಪ್ರಯಾಣಿಕರು ಹಾಗೂ ವಾಹನ ಸವಾರರು ಹೆಚ್ಚಿನ ಗಮನವನ್ನು ರಸ್ತೆಯ ಮೇಲಿರಿಸಿ ಈ ಮಾರ್ಗದಲ್ಲಿ ಸಂಚಾರ ಮಾಡಬೇಕಾಗಿದೆ. ಇಲ್ಲವಾದಲ್ಲಿ ಅಪಾಯ ಕಟ್ಟಿಟ್ಟಬುತ್ತಿ.
