Breaking NewsLatestರಾಷ್ಟ್ರೀಯಸುದ್ದಿ

ಭಾರತಕ್ಕೆ ಆಗಮಿಸುವ ವಿಮಾನ ಪ್ರಯಾಣಿಕರಿಗೆ ಹೊಸ ನಿಯಮ ಜಾರಿ!

ಕೊರೊನಾ ಅಬ್ಬರದ ಹಿನ್ನೆಲೆಯಲ್ಲಿ ಭಾರತಕ್ಕೆ ಆಗಮಿಸುವ ವಿಮಾನ ಪ್ರಯಾಣಿಕರಿಗೆ ವಿಧಿಸಲಾಗಿದ್ದ ನಿಯಮಗಳು ಇನ್ನು ಮುಂದೆ ಕಡ್ಡಾಯವಲ್ಲ ಎಂದು ಕೇಂದ್ರ ವಿಮಾನಯಾನ ಸಚಿವಾಲಯ ಆದೇಶಿಸಿದೆ.

ಭಾರತ ಹಾಗೂ ಜಾಗತಿಕ ಮಟ್ಟದಲ್ಲಿ ಕೋವಿಡ್ ಅಬ್ಬರ ಕಡಿಮೆ ಆಗಿರುವುದರಿಂದ ನಿಯಮಗಳನ್ನು ಸಡಿಲಿಸುವ ಸಮಯ ಬಂದಿದೆ.

ಆದ್ದರಿಂದ ವಿದೇಶೀ ಪ್ರಯಾಣಿಕರು ಭಾರತಕ್ಕೆ ಭೇಟಿ ನೀಡುವಾಗ ಏರ್ ಸುವಿದಾ ನಿಯಮಗಳನ್ನು ಸಡಿಲಗೊಳಿಸಲಾಗಿದೆ ಎಂದು ವಿಮಾನ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಕೋವಿಡ್ ಪ್ರಯುಕ್ತ ವಿಧಿಸಿದ್ದ ನಿಯಮಗಳನ್ನು ಸಡಿಲಿಸಲಾಗಿದ್ದು, ಮಾಸ್ಕ್ ಧರಿಸುವುದು, ಲಸಿಕೆ ಹಾಕಿಸಿಕೊಳ್ಳುವುದು ಸೇರಿದಂತೆ ಎಲ್ಲಾ ನಿಯಮಗಳು ಭಾನುವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ ಎಂದು ಸೂಚನೆಯಲ್ಲಿ ತಿಳಿಸಲಾಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button