Breaking NewsLatestರಾಜಕೀಯರಾಜ್ಯ

ತಡಮಾಡದೆ ಹೊಸ ಸಿಎಂ ಆಯ್ಕೆ ಸಾಧ್ಯತೆ; ಸಂಜೆ 7ಕ್ಕೆ ಬಿಜೆಪಿ ಶಾಸಕಾಂಗ ಪಕ್ಷ ಸಭೆ

ಬೆಂಗಳೂರು: ಬಿಜೆಪಿ ಹೆಚ್ಚು ತಡಮಾಡದೆ ರಾಜ್ಯದ ನೂತನ ಮುಖ್ಯಮಂತ್ರಿಯನ್ನು ಹೆಸರಿಸುವ ನಿರೀಕ್ಷೆ ಇದೆ. ಅದರ ಬೆನ್ನಲ್ಲೇ ಹೊಸ ಮುಖ್ಯಮಂತ್ರಿಯ ಪ್ರಮಾಣವಚನ ಸಮಾರಂಭ ನಡೆಯುವ ಸಾಧ್ಯತೆ ಇದೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.

ಇದಕ್ಕೂ ಮುನ್ನ ಪಕ್ಷದ ಶಾಸಕರ ಅಭಿಪ್ರಾಯ ಸಂಗ್ರಹಿಸಲು ಕೇಂದ್ರ ಮಾನವಸಂಪನ್ಮೂಲ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಮತ್ತು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಆಗಮಿಸಲಿದ್ದಾರೆ. ಸಹ ಉಸ್ತುವಾರಿ ಅರುಣಾದೇವಿ, ಕಿಶನ್ ರೆಡ್ಡಿ ಕೂಡ ಆಗಮಿಸಲಿದ್ದಾರೆ.

ಯಡಿಯೂರಪ್ಪ ಅವರ ಉತ್ತರಾಧಿಕಾರಿ ಯಾರು ಎಂಬುದನ್ನು ಪಕ್ಷದ ಸಂಸದೀಯ ಮಂಡಳಿ ಸಭೆ ತೀರ್ಮಾನಿಸಲಿದೆ. ಪಕ್ಷದ ಶಾಸಕಾಂಗ ಸಭೆ ನೂತನ ಮುಖ್ಯಮಂತ್ರಿಯ ಹೆಸರನ್ನು ಔಪಚಾರಿಕವಾಗಿ ಹೆಸರಿಸಲಿದೆ. ಸಂಜೆ 7ಕ್ಕೆ ಕ್ಯಾಪಿಟೊಲ್ ಹೊಟೇಲ್​ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷ ಸಭೆ ನಡೆಯಲಿದೆ.

ಈ ನಡುವೆ ರಾಜ್ಯದ ಪ್ರವಾಹ ಪರಿಸ್ಥಿತಿ ಸಂದರ್ಭದಲ್ಲಿ ನಡೆದಿರುವ ರಾಜಕೀಯ ಬೆಳವಣಿಗೆಗಳಿಂದ ಜನರು ಬವಣೆಗೀಡಾಗುವಂತಾಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button