ಡಿ.28 ರಿಂದ 10 ದಿನ ರಾಜ್ಯದಲ್ಲೂ ರಾತ್ರಿ ಕರ್ಫ್ಯೂ ಜಾರಿ: ಸಚಿವ ಡಾ.ಕೆ.ಸುಧಾಕರ್

‘ಬೆಂಗಳೂರು: ಕೋವಿಡ್ ರೂಪಾಂತರಿ ಓಮಿಕ್ರಾನ್ ಸೋಂಕು ಪ್ರಕರಣಗಳನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಮತ್ತೆ ನೈಟ್ ಕರ್ಫ್ಯೂ ಜಾರಿಗೊಳಿಸಲು ನಿರ್ಧರಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಭಾನುವಾರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಉನ್ನತಮಟ್ಟದ ಸಭೆಯಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸುವ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಇದೆ 28ರಿಂದ 10 ದಿನಗಳ ಕಾಲ ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಆರೋಗ್ಯ ಸಚಿವ ಡಾ ಸುಧಾಕರ್ ಹೇಳಿದ್ದಾರೆ ತಿಳಿಸಿದ್ದಾರೆ. ಡಿಸೆಂಬರ್ 28 ರಿಂದ ರಾತ್ರಿ 10 ರಿಂದ ಬೆಳಗ್ಗೆ 5 ರ ವರೆಗೆ 10 ದಿನ ರಾತ್ರಿ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ಸಭೆ ನಂತರ ಅವರು ಸುದ್ದಿಗಾರರಿಗೆ ತಿಳಿಸಿದರು.
ಸಾರ್ವಜನಿಕವಾಗಿ ಹೊಸ ವರ್ಷ ಆಚರಣೆಗೆ ಅವಕಾಶ ನೀಡಿಲ್ಲ ಸಭೆ ಸಮಾರಂಭಗಳಲ್ಲಿ ಶೇ. 50 ರಷ್ಟು ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.ಸಭೆಯಲ್ಲಿ ಕಂದಾಯ ಸಚಿವ ಅಶೋಕ್, ಗೃಹ ಸಚಿವ ಆರಗ ಜ್ಞಾನೇಂದ್ರ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು, ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಭಾಗವಹಿಸಿದ್ದರು.
