Breaking NewsLatestಜಿಲ್ಲಾ ಸುದ್ದಿಬೆಂಗಳೂರುರಾಜ್ಯಸುದ್ದಿ
ರಾಮನಗರ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಕಣಕ್ಕೆ : ಹೆಚ್.ಡಿ ಕುಮಾರಸ್ವಾಮಿ

ಬೆಂಗಳೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಕಸರತ್ತು ಆರಂಭವಾಗಿದೆ. ಇದೀಗ ಮಾಜಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ರಾಮನಗರದಿಂದ ಸ್ಪರ್ಧೆ ಮಾಡಲಿದ್ದಾರೆ ಎಂದು ಕುಮಾರಸ್ವಾಮಿ ಸುಳಿವು ನೀಡಿದ್ದಾರೆ.
ಈ ಕುರಿತು ಮಾಜಿ ಸಿಎಂ ಕುಮಾರಸ್ವಾಮಿ ಸುಳಿವು ನೀಡಿದ್ದು, ಶುಕ್ರವಾರ ತೊಂಭತ್ತು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದಿದ್ದಾರೆ. ಸಂಭವನೀಯ ಪಟ್ಟಿಯಲ್ಲಿ ಇರುವ ಅಭ್ಯರ್ಥಿಗಳ ಪಟ್ಟಿಯೇ ಅಂತಿಮವಲ್ಲ ಎಂದಿರುವ ಕುಮಾರಸ್ವಾಮಿ ಕೆಲಸ ಮಾಡಿಲ್ಲ ಅಂದರೆ ಬದಲಾವಣೆ ಮಾಡಬೇಕಾಗುತ್ತದೆ ಎಂದಿದ್ದಾರೆ. ನಿಖಿಲ್ ಕುಮಾರಸ್ವಾಮಿ ಅವರನ್ನೇ ರಾಮನಗರ ಕ್ಷೇತ್ರದಿಂದ ಕಣಕ್ಕಿಳಿಸುವ ಬಗ್ಗೆ ಕುಮಾರಸ್ವಾಮಿ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.
