Breaking NewsLatestರಾಜಕೀಯರಾಜ್ಯರಾಷ್ಟ್ರೀಯ

ರಾಜ್ಯ ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಿದ್ದರಾಮಯ್ಯ

ನವದೆಹಲಿ: ರಾಜ್ಯ ಕಾಂಗ್ರೆಸ್ ನಲ್ಲಿ ಯಾವುದೇ ಬಿರುಕು, ಭಿನ್ನಾಭಿಪ್ರಾಯ ಇಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪಕ್ಷದಲ್ಲಿ ಒಡಕು ಇದೆ ಎಂಬ ಮಾತುಗಳು ಸತ್ಯಕ್ಜೆ ದೂರ. ನಾವೀಗ ಪ್ರತಿಪಕ್ಷದಲ್ಲಿ ಇದ್ದೇವೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬರಲಿದೆ. ಹೀಗಿರುವಾಗ ಒಡಕಿನ ಮಾತು ಯಾಕೆ ಬರುತ್ತದೆ ಎಂದರು.

ರಾಜ್ಯ ಕಾಂಗ್ರೆಸ್ ಪ್ರಸ್ತುತ ಬಿಜೆಪಿಯ ದುರಾಡಳಿತ, ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುತ್ತಿದೆ. ಸರ್ಕಾರದ ಬಗ್ಗೆ ಜನ ಬೇಸತ್ತಿದ್ದಾರೆ. ಈ ಸರ್ಕಾರವನ್ನು ಕಿತ್ತೊಗೆಯಲು ಎಲ್ಲರೂ ಸೇರಿ ಹೋರಾಟ ಮಾಡುತ್ತಿದ್ದೇವೆ ಎಂದರು.

ಮುಂದಿನ ಮುಖ್ಯಮಂತ್ರಿ ವಿಷಯದ ಬಗ್ಗೆ ಚರ್ಚೆ ಅಪ್ರಸ್ತುತ. ಚುನಾವಣೆ ಬಳಿಕ‌ ಶಾಸಕರ ಅಭಿಪ್ರಾಯ ಪಡೆದು ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ. ವರಿಷ್ಠರ ತೀರ್ಮಾನವೇ ಅಂತಿಮ. ಅವರ ನಿರ್ಧಾರಕ್ಕೆ ಎಲ್ಲರೂ ಬದ್ಧ ಎಂದು ತಿಳಿಸಿದರು.

ಇಂದು ಸಂಜೆ ಪಕ್ಷದ ವರಿಷ್ಠರಾದ ರಾಹುಲ್ ಗಾಂಧಿಯವರನ್ನು ಭೇಟಿಯಾಗಲಿದ್ದೇನೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದರು.

Spread the love

Related Articles

Leave a Reply

Your email address will not be published. Required fields are marked *

Back to top button