Breaking NewsLatestಮೆಟ್ರೋರಾಜ್ಯಸುದ್ದಿ

ಹಿಜಾಬ್ ಧರಿಸಿ ಬಂದ್ರೆ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ನೋ ಎಂಟ್ರಿ!

ಬೆಂಗಳೂರು: ನಾಳೆಯಿಂದ ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆ ಶುರುವಾಗಲಿದೆ. ಈ ವೇಳೆ ಪರೀಕ್ಷೆಗೆ ಆಗಮಿಸುವ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಬರಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ನೀಡಿದೆ. ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿರುವ ಶಾಲಾ ಸಮವಸ್ತ್ರ ಕಡ್ಡಾಯವಾಗಿರಲಿದೆ. ಖಾಸಗಿ ಶಾಲೆಗಳಲ್ಲಿ ಆಯಾ ಆಡಳಿತ ಮಂಡಳಿಗಳು ನಿರ್ಧರಿಸಿರುವ ಸಮವಸ್ತ್ರ ಕಡ್ಡಾಯ ಮಾಡಲಾಗುತ್ತದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ನೀಡಿದೆ.

ಮಾರ್ಚ್ 15 ರಂದು ಕರ್ನಾಟಕ ಹೈಕೋರ್ಟ್ ಶಾಲಾ- ಕಾಲೇಜಿನಲ್ಲಿ ಹಿಜಾಬ್ ಧರಿಸುವಂತಿಲ್ಲ, ಸರ್ಕಾರದ ವಸ್ತ್ರ ಸಂಹಿತೆಯನ್ನು ಪ್ರಶ್ನೆ ಮಾಡುವಂತಿಲ್ಲ ಎಂದು ತೀರ್ಪು ನೀಡಿದೆ. ಈ ಬೆನ್ನೆಲ್ಲೇ ಕೋರ್ಟ್ ತೀರ್ಪಿಗೆ ಬೇಸರ ವ್ಯಕ್ತಪಡಿಸಿರುವ ಮುಸ್ಲಿಂ ಸಮುದಾಯದ ಮುಖಂಡರು ಕರ್ನಾಟಕ ಬಂದ್ಗೆ ಕರೆ ನೀಡಿದ್ದರು.

Spread the love

Related Articles

Leave a Reply

Your email address will not be published. Required fields are marked *

Back to top button