Breaking NewsLatestರಾಜ್ಯಸುದ್ದಿ

ಮಾ.31 ರಿಂದ ಕೋವಿಡ್ ನಿಯಂತ್ರಣಕ್ಕೆ ವಿಧಿಸಿದ್ದ ಎಲ್ಲ ನಿರ್ಬಂಧಗಳು ಸಡಿಲಿಕೆ

ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಕಡಿಮೆಯಾಗಿದೆ. ಹೀಗಾಗಿ ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರ ವಿಧಿಸಿದ್ದ ಎಲ್ಲ ನಿರ್ಬಂಧಗಳನ್ನೂ ಮಾರ್ಚ್ 31 ರಿಂದ ವಾಪಸ್ ತೆಗೆದುಕೊಳ್ಳವ ನಿರ್ಧಾರ ಗೃಹ ಸಚಿವಾಲಯ ಮಾಡಿದೆ.

ಕೋವಿಡ್ ಸುರಕ್ಷತಾ ಕ್ರಮಗಳಿಗೆ ಸಂಬಂಧಪಟ್ಟಂತೆ ವಿಪತ್ತು ನಿರ್ವಹಣಾ ಕಾಯ್ದೆಯನ್ನೂ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಆದರೆ ಮಾಸ್ಕ್​ ಮಾತ್ರ ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿರುತ್ತದೆ ಎಂದೂ ಕೇಂದ್ರ ಗೃಹ ಇಲಾಖೆ ಸ್ಪಷ್ಟಪಡಿಸಿದೆ.

ಇನ್ನು ಚೀನಾ, ದಕ್ಷಿಣ ಕೊರಿಯಾ, ಯುಕೆ, ಸಿಂಗಾಪುರ, ಫ್ರಾನ್ಸ್​, ಜರ್ಮನಿಗಳಲ್ಲಿ ಮತ್ತೆ ಹೊಸದಾಗಿ ಕೋವಿಡ್ ಪ್ರಕರಣ ಕೈ ಮೀರಿದ್ದು, ಕೆಲ ಕಡೆ ಲಾಕ್ ಡೌನ್ ಹೇರಲಾಗಿದೆ.ಆದರೂ ಕೂಡ ಕೇಂದ್ರ ಸರ್ಕಾರ ಎಲ್ಲ ರೀತಿಯ ಕೋವಿಡ್ 19 ನಿರ್ಬಂಧ ಮಾರ್ಗಸೂಚಿಗಳನ್ನು ಮಾರ್ಚ್​ 31ರಿಂದ ತೆಗೆದುಹಾಕುವುದಾಗಿ ಘೋಷಿಸಿದೆ.

Spread the love

Related Articles

Leave a Reply

Your email address will not be published. Required fields are marked *

Back to top button