Breaking NewsLatestಜಿಲ್ಲಾ ಸುದ್ದಿಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಮುಸ್ಲಿಮರಿಗೆ ಪ್ರತ್ಯೇಕ ಕಾಲೇಜುಗಳ ಸ್ಥಾಪನೆ ಇಲ್ಲ : ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ನೂತನವಾಗಿ ಮುಸ್ಲೀಂ ಸಮುದಾಯದ ಮಹಿಳೆಯರಿಗೆ ಸರ್ಕಾರದಿಂದ ಪ್ರತ್ಯೇಕ ಕಾಲೇಜು ಸ್ಥಾಪನೆ ಮಾಡಲಾಗುತ್ತದೆ ಎನ್ನಲಾಗುತ್ತಿತ್ತು. ಆದ್ರೇ ಮುಸ್ಲೀಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು ಸ್ಥಾಪನೆ ಚರ್ಚೆಯಾಗಿಲ್ಲ ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ವಕ್ಫ್ ಮಂಡಳಿ ಅಧ್ಯಕ್ಷರು ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕವಾಗಿ ಕಾಲೇಜು ತೆರೆಯಲಿದ್ದು ಹಿಜಾಬ್ ಧರಿಸಲು ಅನುಮತಿ ನೀಡುವು ದಾಗಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಈ ಬಗ್ಗೆ ಸರ್ಕಾರದಲ್ಲಿ ಚರ್ಚೆಯಾಗಿಲ್ಲ. ಇದು ಅವರ ವೈಯಕ್ತಿಕ ಅಭಿಪ್ರಾಯವಿರಬಹುದು. ಇದು ನಮ್ಮ ಸರ್ಕಾರದ ನಿಲುವಲ್ಲ. ವಕ್ಫ್ ಮಂಡಳಿ ಅಧ್ಯಕ್ಷರು ಈ ಬಗ್ಗೆ ಸರ್ಕಾರದೊಂದಿಗೆ ಚರ್ಚೆ ಮಾಡಬೇಕು ಎಂದರು.

ಪಕ್ಷದಲ್ಲಿ ರೌಡಿಗಳಿಗೆ ಅವಕಾಶವಿಲ್ಲ

ಪಕ್ಷದಲ್ಲಿ ಯಾವುದೇ ರೌಡಿಗಳನ್ನು ನಾವು ಸೇರ್ಪಡೆ ಮಾಡುವುದಿಲ್ಲ. ಯಾವುದೇ ಅವಕಾಶಗಳನ್ನು ಕೊಡುವುದಿಲ್ಲ ಎನ್ನುವುದು ಸ್ಪಷ್ಟವಾಗಿದೆ. ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದರು.

Spread the love

Related Articles

Leave a Reply

Your email address will not be published. Required fields are marked *

Back to top button