Breaking Newsಮೆಟ್ರೋರಾಜ್ಯ
ರಾಜ್ಯದಲ್ಲಿ ಆನ್ಲೈನ್ ಬೆಟ್ಟಿಂಗ್ ನಿಷೇಧ: ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಗೃಹ ಸಚಿವ ಆರಗ ಜ್ಞಾನೇಂದ್ರ ಶುಕ್ರವಾರ ವಿಧಾನಸಭೆಯಲ್ಲಿ ಆನ್ಲೈನ್ ಬೆಟ್ಟಿಂಗ್ ಪ್ರತಿಬಂಧಕ ಕಾಯ್ದೆಯ ವಿಧೇಯಕವನ್ನು ಮಂಡಿಸಿದರು.
ರಾಜ್ಯದಲ್ಲಿ ಆನ್ಲೈನ್ ಗ್ಯಾಂಬಲಿಂಗ್ ನಿಷೇಧದ ನಿಟ್ಟಿನಲ್ಲಿ ಇದೊಂದು ಸರಕಾರದ ಮಹತ್ವದ ಹೆಜ್ಜೆ ಎಂದು ಅವರು ಬಣ್ಣಿಸಿದರು.
ಈ ತಿದ್ದುಪಡಿ ವಿಧೇಯಕ ಲಾಟರಿ, ಕುದುರೆ ರೇಸ್ ಗೆ ಅನ್ವಯವಾಗುವುದಿಲ್ಲ. ಉಳಿದಂತೆ ಮೊಬೈಲ್, ಕಂಪ್ಯೂಟರ್ ಸೇರಿದಂತೆ ಇನ್ನಿತರ ಆನ್ ಲೈನ್ ಜೂಜಾಟ, ಬೆಟ್ಟಿಂಗ್ ಗಳಿಗೆ ಅನ್ವಯವಾಗಲಿದೆ.
ಆನ್ ಲೈನ್ ಗ್ಯಾಂಬ್ಲಿಂಗ್ ತೊಡಗುವವರಿಗೆ ಸಹಾಯ ಮಾಡುವವರಿಗೆ ಹಾಗೂ ಆಶ್ರಯ ನೀಡುವವರಿಗೂ 6 ತಿಂಗಳು ಜೈಲುಶಿಕ್ಷೆ ಹಾಗೂ 10 ಸಾವಿರ ರೂ ದಂಡ ವಿಧಿಸಲಾಗುವುದು ಎಂದು ಸಚಿವ ಆರಗ ಜ್ಞಾನೇಂದ್ರ ಹೇಳಿದರು.
