Breaking NewsLatestಕೋಲಾರಜಿಲ್ಲಾ ಸುದ್ದಿ

ಎರಡೂ ರಾಷ್ಟ್ರೀಯ ಪಕ್ಷಗಳ ದುರಾಡಳಿತದಿಂದ ಜನ ಬೇಸತ್ತಿದ್ದಾರೆ: ಹೆಚ್. ಡಿ. ಕುಮಾರಸ್ವಾಮಿ

ಕೋಲಾರ: ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಗಳು ಪ್ರಾರಂಭವಾಗುತ್ತಿರುವಾಗ ರಾಜ್ಯದಲ್ಲಿ ಎಲ್ಲಾ ಸಮಾಜದ ಮಕ್ಕಳಿಗೆ ಮುಕ್ತವಾದ ವಾತಾವರಣದಲ್ಲಿ ಪರೀಕ್ಷೆ ಬರೆಯಲು ಸರ್ಕಾರ ಕ್ರಮ ಕೈಗೊಳ್ಳಬೇಕು, ಮಕ್ಕಳ ಭವಿಷ್ಯದ ದೃಷ್ಟಿಯಿಂದ ಸರ್ಕಾರ ಎಲ್ಲಾ ಮಕ್ಕಳಿಗೂ ಅವಕಾಶ ಕಲ್ಪಿಸಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದರು.

ನಗರದಲ್ಲಿ ಮಾತನಾಡಿದ ಅವರು, ಶಾಲಾ ಮಟ್ಟದಲ್ಲಿ ಧಾರ್ಮಿಕ ಘರ್ಷಣೆಗಳು ಹುಟ್ಟು ಹಾಕಿದರು, ನಂತರ ಜಾತ್ರಾ ಮಹೋತ್ಸವದಲ್ಲಿ ಮಳಿಗೆಗಳು ಹಾಕುವ ವಿಚಾರದಲ್ಲಿ ಧಾರ್ಮಿಕ ಸಂಘರ್ಷ ಹುಟ್ಟು ಹಾಕಿದರು. ನಂತರ ಧಾರ್ಮಿಕ ಕ್ಷೇತ್ರಗಳ ಸುತ್ತಮುತ್ತ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸುವ ಕ್ರಮಕ್ಕೆ ಮುಂದಾಗಿರುವ ಸರ್ಕಾರ ಸಂವಿಧಾನದ ಅಡಿಯಲ್ಲಿ 6.5 ಕೋಟಿ ಜನರ ರಕ್ಷಣೆ ಮಾಡಬೇಕಿದೆ. ಆದ್ರೆ ಈ ಸರ್ಕಾರ ಕೋಮು ಸಂಘರ್ಷಗಳನ್ನು ಸೃಷ್ಟಿಸುವಲ್ಲಿ ನಿರತವಾಗಿದೆ ಎಂದರು.

ಇಂದಿನ ರಾಜ್ಯದ ಈ ಎಲ್ಲಾ ಪರಿಸ್ಥಿತಿಗೂ ಮೂಲ ಕಾರಣ ಸಿದ್ದರಾಮಯ್ಯನವರೇ. ಮೈತ್ರಿ ಸರ್ಕಾರ ರಚನೆ ಮಾಡಲು ಇಷ್ಟವಿಲ್ಲದಿದ್ದರೂ ರಾಜ್ಯವನ್ನು ಕೋಮು ದ್ವೇಷಗಳಿಂದ ಉಳಿಸಬೇಕೆಂಬ ದೃಷ್ಟಿಯಿಂದ ಕಾಂಗ್ರೆಸ್ ನವರ ಜೊತೆಗಿನ ಮೈತ್ರಿಗೆ ಒಪ್ಪಬೇಕಾಯಿತು ನಂತರ ನಡೆದಿದ್ದೆಲ್ಲಾ ರಾಜ್ಯದ ಜನತೆಗೆ ತಿಳಿದಿದೆ ಎಂದರು.

ಕಳೆದ 2004ರಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಸರ್ಕಾರ ರಚಿಸಿದಾಗ ಸಿದ್ದರಾಮಯ್ಯನವರ ಕುತಂತ್ರದಿಂದಲೇ ಕಾಂಗ್ರೆಸ್ ಬಿಟ್ಟು ಬಿಜೆಪಿ ಜೊತೆ ಕೈ ಜೋಡಿಸಬೇಕಾಯಿತು ಎಂದು ಅವರು ಕಳೆದ ಭಾರಿ ಸಿದ್ದರಾಮಯ್ಯನವರು ಜೆಡಿಎಸ್ ಪಕ್ಷ ಬಿಜೆಪಿ ಬೀ ಟೀಂ ಎಂದು ಪ್ರಚಾರ ಮಾಡಿದ ಪರಿಣಾಮ ರಾಜ್ಯದಲ್ಲಿ ಬಿಜೆಪಿ 105 ಸ್ಥಾನ ಗೆಲ್ಲಲು ಕಾರಣವಾಯಿತು

ರಾಜ್ಯದಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳಿಗೂ ಕೋಮುಗಲಭೆಯ ಅನಿವಾರ್ಯತೆ ಇದೆ ಎರಡೂ ರಾಷ್ಟ್ರೀಯ ಪಕ್ಷಗಳು ಸಮಾಜದಲ್ಲಿ ಸಾಮರಸ್ಯ ಕದಡಿ ಅಮಾಯಕ ಮಕ್ಕಳನ್ನು ಬಲಿ ಕೊಡಲು ಹೊರಟಿದ್ದಾರೆ. ಇದರ ಬಗ್ಗೆ ಜನ ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಜನ ತುಂಬಾ ಕಷ್ಟ ನಷ್ಟಗಳನ್ನು ಅನುಭವಿಸಬೇಕಾಗಿದೆ ಎಂದರು

Spread the love

Related Articles

Leave a Reply

Your email address will not be published. Required fields are marked *

Back to top button