Breaking NewsLatestರಾಷ್ಟ್ರೀಯಸುದ್ದಿ
ಮಕ್ಕಳ ಜೊತೆ ಮೆಟ್ರೋದಲ್ಲಿ ಮೋದಿ ಪ್ರಯಾಣ

ಪ್ರಧಾನಿ ನರೇಂದ್ರ ಮೋದಿ ಇಂದು ಪುಣೆ ಮೆಟ್ರೋ ರೈಲು ಯೋಜನೆಯನ್ನು ಉದ್ಘಾಟನೆ ಮಾಡಿದರು. ಒಟ್ಟು 32.2 ಕಿಲೋಮೀಟರ್ ಪುಣೆ ಮೆಟ್ರೋ ರೈಲು ಯೋಜನೆಯ 12 ಕಿ.ಮೀ. ವ್ಯಾಪ್ತಿಯನ್ನು ಉದ್ಘಾಟಿಸಿದ ಮೋದಿ ಬಳಿಕ ಟಿಕೆಟ್ ಖರೀದಿಸಿ ಮಕ್ಕಳೊಂದಿಗೆ ಗಾರ್ವೇರ್ ಮೆಟ್ರೋ ನಿಲ್ದಾಣದಿಂದ ಆನಂದನಗರ ನಿಲ್ದಾಣದವರೆಗೆ ಪ್ರಯಾಣಿಸಿದರು.
ಇದರ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಮೋದಿ, ಪುಣೆಯ ಜನತೆ ಅನುಕೂಲಕರವಾಗಿ ಮತ್ತು ಆರಾಮದಾಯಕವಾಗಿ ಪ್ರಯಾಣಿಸಬಹುದು ಎಂದು ಖಾತ್ರಿಪಡಿಸಿದ್ದು, ಟ್ವಿಟರ್ನಲ್ಲಿ ಮಕ್ಕಳ ಜೊತೆ ಕುಳಿತಿರುವ ಫೋಟೋವನ್ನು ಹಂಚಿಕೊಳ್ಳುವುದರ ಜೊತೆಗೆ ಕ್ಯಾಪ್ಷನ್ನಲ್ಲಿ ಪುಣೆ ಮೆಟ್ರೋದಲ್ಲಿ ಯಂಗ್ ಫ್ರೆಂಡ್ಸ್ ಜೊತೆಗೆ ಪ್ರಯಾಣ ಎಂದು ಬರೆದುಕೊಂಡಿದ್ದಾರೆ.
