Breaking NewsLatestರಾಷ್ಟ್ರೀಯಸುದ್ದಿ
ಸಿ.ಆರ್.ಪಾಟೀಲ್ಗೆ ಪ್ರಧಾನಿ ಮೋದಿ ಅಭಿನಂದನೆ: ಈ ಬಾರಿಯೂ ಭೂಪೇಂದ್ರ ಪಟೇಲ್ಗೆ ಗುಜರಾತ್ ಸಿಎಂ ಗಾದಿ

ನವದೆಹಲಿ: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವಿನತ್ತ ಮುನ್ನುಗಿದ್ದು, ರಾಜ್ಯ ಬಿಜೆಪಿ ಅಧ್ಯಕ್ಷ ಸಿ.ಆರ್.ಪಾಟೀಲ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಅಭಿನಂದಿಸಿದ್ದಾರೆ.
ಸದ್ಯದ ಮಾಹಿತಿ ಪ್ರಕಾರ ಡಿ.11ರೊಳಗೆ ಹೊಸ ಸರ್ಕಾರ ರಚನೆಯಾಗಲಿದ್ದು, ಈಗಿನ ಸಿಎಂ ಭೂಪೇಂದ್ರ ಪಟೇಲ್ ಅವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯದಲ್ಲಿ 7ನೇ ಬಾರಿಗೆ ಬಿಜೆಪಿ ಅಧಿಕಾರದ ಗದ್ದುಗೆಗೆ ಏರುತ್ತಿದೆ.
ಡಿ.1 ಮತ್ತು 5ರಂದು ಗುಜರಾತ್ನ 182 ವಿಧಾನಸಭಾ ಸೀಟುಗಳಿಗೆ ಎರಡು ಹಂತಗಳಲ್ಲಿ ಮತದಾನ ನಡೆದಿತ್ತು. ಮತದಾನೋತ್ತರ ಸಮೀಕ್ಷೆಗಳೂ ಬಿಜೆಪಿ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದ್ದವು.
