Breaking NewsLatestರಾಷ್ಟ್ರೀಯಸುದ್ದಿ

ಮತದಾನದ ದಿನ ರೋಡ್ ಶೋ ನಡೆಸಿದ ಪ್ರಧಾನಿ ಮೋದಿ

ನವದೆಹಲಿ: ಗುಜರಾತ್‌ ವಿಧಾನಸಭೆಗೆ ನಡೆದ ಎರಡನೇ ಹಂತದ ಮತದಾನದಂದು (ಡಿಸೆಂಬರ್‌ 5) ಪ್ರಧಾನಿ ನರೇಂದ್ರ ಮೋದಿ ಅವರು ರೋಡ್‌ ಶೋ ನಡೆಸಿದ್ದಾರೆ ಎಂದು ಆರೋಪಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಕಿಡಿಕಾರಿದ್ದಾರೆ.

ಅಹಮದಾಬಾದ್‌ನಲ್ಲಿ ಇಂದು (ಸೋಮವಾರ) ಮತದಾನ ಮಾಡಲು ಮತಗಟ್ಟೆಗೆ ನಡೆದು ಸಾಗಿದ ಪ್ರಧಾನಿ ಅವರು, ದಾರಿಯುದ್ದಕ್ಕೂ ನೆರೆದಿದ್ದ ಜನರತ್ತ ಕೈ ಬೀಸುತ್ತಾ ಸಾಗಿದ್ದರು.

ಮತದಾನದ ದಿನದಂದು ಪ್ರಧಾನಿ ಮೋದಿಯವರು ಬೆಂಬಲಿಗರತ್ತ ಕೈ ಬೀಸುತ್ತಾ ಸಾಗಿರುವುದು ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಕಾಂಗ್ರೆಸ್‌ ಪಕ್ಷವು ಚುನಾವಣಾ ಆಯೋಗಕ್ಕೆ ದೂರು ನೀಡಲು ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

Spread the love

Related Articles

Leave a Reply

Your email address will not be published. Required fields are marked *

Back to top button