Breaking NewsLatestರಾಷ್ಟ್ರೀಯಸುದ್ದಿ
ಕೃಷಿ ಕಾಯ್ದೆ ವಾಪಸ್ ನಂತರ ಮೊದಲ ಬಾರಿಗೆ ಪ್ರಧಾನಿ ಮೋದಿ ಪಂಜಾಬಿಗೆ ಭೇಟಿ

ಅಮೃತಸರ: ಚುನಾವಣಾ ಹೊಸ್ತಿಲಲ್ಲಿರುವ ಪಂಜಾಬ್ ರಾಜ್ಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಭೇಟಿ ನೀಡಿದ್ದಾರೆ.
ಭಟಿಂಡಾ ಕ್ಕೆ ಆಗಮಿಸಿದ ಮೋದಿ ನಂತರ ಭಾರತ-ಪಾಕಿಸ್ತಾನ ಗಡಿಯಲ್ಲಿರುವ ಫಿರೋಜ್ ಪುರಕ್ಕೆ ತೆರಳಿ ಹಲವು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ. ಪಂಜಾಬ್ ಪ್ರವಾಸ ಕೈಗೊಳ್ಳುವ ಮೊದಲು ಮೋದಿ ಟ್ವೀಟ್ ಮಾಡಿದ್ದು, ಪಂಜಾಬಿನ ಸಹೋದರ- ಸಹೋದರಿಯರನ್ನು ಕಾಣಲು ಬಹಳ ಉತ್ಸುಕನಾಗಿದ್ದೇನೆ ಎಂದು ಹೇಳಿದ್ದಾರೆ.
42, 750 ಸಾವಿರ ಕೋಟಿ ರೂಪಾಯಿಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅವರು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಅವರ ಭೇಟಿಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವ್ಯಾಪಕ ಬಿಗಿ ಭದ್ರತೆ ಏರ್ಪಡಿಸಲಾಗಿದೆ.
ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದುಕೊಂಡ ನಂತರ ನರೇಂದ್ರ ಮೋದಿ ಇದೇ ಮೊದಲ ಬಾರಿಗೆ ಪಂಜಾಬಿಗೆ ಭೇಟಿ ನೀಡಿದ್ದಾರೆ.
