ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ

ಬೆಂಗಳೂರು : ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಶುಭಾಶಯ ತಿಳಿಸಿದ್ದಾರೆ.
ಈ ಕುರಿತಂತೆ ಟ್ವಿಟ್ ಮಾಡಿರುವಂತ ಅವರು, ಕರ್ನಾಡಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದಂತ ಬಸವರಾಜ ಬೊಮ್ಮಾಯಿಯವರಿಗೆ ಅಭಿನಂದನೆಗಳು. ಬೊಮ್ಮಾಯಿಯವರು ಶಾಸಕಾಂಗ ಮತ್ತು ಆಡಳಿತಾತ್ಮಕ ದೃಷ್ಠಿಯಿಂದ ಅನುಭವ ತಮ್ಮೊಂದಿಗೆ ತರುತ್ತಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಅಸಾಧಾರಣವಾಗಿ ಕೆಲಸ ಮಾಡಲಿದ್ದಾರೆ ಎಂಬ ವಿಶ್ವಾಸ ನನಗೆ ಇದೆ. ಫಲಪ್ರದವಾದ ಅಧಿಕಾರಾವಧಿಗೆ ಶುಭಾಶಯಗಳು ಎಂಬುದಾಗಿ ತಿಳಿಸಿದ್ದಾರೆ.
ಇನ್ನೂ ಮತ್ತೊಂದು ಟ್ವಿಟ್ ನಲ್ಲಿ ಬಿಎಸ್ ಯಡಿಯೂರಪ್ಪ ಅವರ ಕೊಡುಗೆಗೆ ಬಗ್ಗೆ ಯಾವುದೇ ಪದಗಳು ಎಂದಿಗೂ ನ್ಯಾಯ ಒದಗಿಸುವುದಿಲ್ಲ. ನಮ್ಮ ಪಕ್ಷದ ಕಡೆಗೆ ಮತ್ತು ಕರ್ನಾಟಕದ ಬೆಳವಣಿಗೆಯ ಕಡೆಗೆ ದಶಕಗಳ ಕಾಲ ಅವರು ಕಷ್ಟಪಟ್ಟು ಶ್ರಮಿಸಿದರು. ಕರ್ನಾಟಕದ ಎಲ್ಲಾ ಭಾಗಗಳಲ್ಲಿ ಪ್ರಯಾಣಿಸಿದ್ದರು. ಜನರೊಂದಿಗೆ ಜನನಾಯಕರಾಗಿ ಕೆಲಸ ಮಾಡಿದರು. ಸಾಮಾಜಿಕ ಕಲ್ಯಾಣದ ಬದ್ಧತೆಗಾಗಿ ಅವರು ಮೆಚ್ಚುಗೆ ಪಡೆದರು ಎಂಬುದಾಗಿ ತಿಳಿಸಿದ್ದಾರೆ.
ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಾಜಿ ಸಿಎಂ ಯಡಿಯೂರಪ್ಪ ಶುಭಕೋರಿದ್ದಾರೆ
ಮಾಜಿ ಪ್ರಧಾನಿ ದೇವೇಗೌಡರು ಬೊಮ್ಮಾಯಿ ಅವರಿಗೆ ಶುಭ ಕೋರಿದ್ದಾರೆ.
