Breaking NewsLatestಜಿಲ್ಲಾ ಸುದ್ದಿಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿ

ಕಾಶಿ ದರ್ಶನ ವಿಶೇಷ ರೈಲಿಗೆ ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಚಾಲನೆ

ಬೆಂಗಳೂರು: ಮೆಜೆಸ್ಟಿಕ್​ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರು-ಮೈಸೂರು-ಚೆನ್ನೈ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್‌ ವಿಶೇಷ ರೈಲು ಹಾಗೂ ಭಾರತ್​​ ಗೌರವ್​ ಕಾಶಿ ದರ್ಶನ ವಿಶೇಷ ರೈಲಿಗೆ ಚಾಲನೆ ನೀಡಿದರು.

ಬೆಳಗ್ಗೆ 10.25ಕ್ಕೆ ಮೆಜೆಸ್ಟಿಕ್ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ವಂದೇ ಭಾರತ್ ವಿಶೇಷ ರೈಲಿಗೆ ಹಸಿರು ನಿಶಾನೆ ತೋರಿದರು. ಈ ವೇಳೆ ಸಿಎಂ ಬಸವರಾಜ್ ಬೊಮ್ಮಾಯಿ, ರಾಜ್ಯಪಾಲ ತಾವರ್ ಚಂದ್ ಗೆಹ್ಲೋತ್, ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್, ಪ್ರಹ್ಲಾದ್ ಜೋಷಿ ಉಪಸ್ಥಿತರಿದ್ದರು.

ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಸಂಜೆ 5.20ಕ್ಕೆ ಎಂಜಿಆರ್ ಚೆನ್ನೈ ಸೆಂಟ್ರಲ್ ಸ್ಟೇಷನ್ ತಲುಪಲಿದೆ. 16 ಕೋಚ್​ಗಳ ವಂದೇ ಭಾರತ್ ರೈಲು ಬೆಂಗಳೂರು ಕಂಟೋನ್ಮೆಂಟ್, ಬೈಯ್ಯಪ್ಪನ ಹಳ್ಳಿ, ಕೆ.ಆರ್.ಪುರಂ, ವೈಟ್ ಫೀಲ್ಡ್, ದೇವನಗೊಂದಿ, ಮಾಲೂರು, ತ್ಯಾಕಲ್, ಬಂಗಾರಪೇಟೆ, ವರದಪುರ, ಬಿಸನತ್ತಂ, ಕುಪ್ಪಂ, ಮುಲನೂರ್, ಸೋಮನಾಯಕ್ಕನ್ ಪಟ್ಟಿ, ಜೋಲಾರ್ ಪೇಟ್ ಜಂಕ್ಷನ್​ ಸೇರಿದಂತೆ 40 ರೈಲು ನಿಲ್ದಾಣಗಳಲ್ಲಿ ಸ್ಟಾಪ್ ತೆಗೆದುಕೊಳ್ಳಲಿದೆ.ವಂದೇ ಭಾರತ್ ಎಕ್ಸ್‌ಪ್ರೆಸ್‌, ಕಾಶಿ ದರ್ಶನ ವಿಶೇಷ ರೈಲಿಗೆ ಪ್ರಧಾನಿ ಮೋದಿ ಚಾಲನೆ

ವಂದೇ ಭಾರತ್ ಮೈಸೂರು-ಚೆನ್ನೈ ಟಿಕೆಟ್ ದರ ಎಸಿ ಚೇರ್ ಕಾರ್ (CC) ದರ 1,200 ರೂ. ಇದ್ದು, ಎಕ್ಸಿಕ್ಯೂಟಿವ್ ಎಸಿ ಚೇರ್ ಕಾರ್ (EC) ದರ 2,295 ರೂ. ಇರಲಿದೆ. ಇನ್ನು ಚೆನ್ನೈ-ಮೈಸೂರು ವಂದೇ ಭಾರತ್ ರೈಲಿನ ಟಿಕೆಟ್ ದರ ಎಸಿ ಚೇರ್ ಕಾರ್ (CC) ದರ 1,365 ರೂ., ಎಕ್ಸಿಕ್ಯೂಟಿವ್ ಎಸಿ ಚೇರ್ ಕಾರ್ (EC) ದರ 2,485 ರೂ. ಇರಲಿದೆ.

Spread the love

Related Articles

Leave a Reply

Your email address will not be published. Required fields are marked *

Back to top button