Breaking NewsLatestರಾಷ್ಟ್ರೀಯ
ಭವಾನಿಪುರದಲ್ಲಿ ಮಮತಾ ವಿರುದ್ಧ ಬಿಜೆಪಿಯಿಂದ ಪ್ರಿಯಾಂಕಾ ಟಿಬ್ರೇವಾಲ್ ಕಣಕ್ಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಸೆ.30ರಂದು ನಡೆಯಲಿರುವ ಉಪಚುನಾವಣೆಗೆ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ವಕೀಲೆ ಪ್ರಿಯಾಂಕಾ ಟಿಬ್ರೇವಾಲ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ.
ಕೇಂದ್ರದ ಮಾಜಿ ಸಚಿವ ಬಬುಲ್ ಸುಪ್ರಿಯೊ ಅವರಿಗೆ ಕಾನೂನು ಸಲಹೆಗಾರರಾಗಿದ್ದ ಪ್ರಿಯಾಂಕ ಟಿಬ್ರೇವಾಲ್ ಕಳೆದ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿಯೂ ಸ್ಪರ್ಧಿಸಿದ್ದರು. ಆದರೆ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿಯೆದುರು ಅವರಿಗೆ ಸೋಲಾಗಿತ್ತು. ಅವರು 2014ರಲ್ಲಿಯೇ ಬಿಜೆಪಿ ಸೇರ್ಪಡೆಯಾಗಿದ್ದರು.
ಕಳೆದ ಚುನಾವಣೆಯಲ್ಲಿ ಪ್ರಚಂಡ ಬಹುಮತದೊಂದಿಗೆ ತೃಣಮೂಲ ಕಾಂಗ್ರೆಸ್ ಗೆದ್ದ ಬಳಿಕ ಮೂರನೇ ಬಾರಿಗೆ ಪಶ್ಚಿಮ ಬಂಗಾಳ ಸಿಎಂ ಆಗಿರುವ ಮಮತಾ ಬ್ಯಾನರ್ಜಿ ಹುದ್ದೆಯಲ್ಲಿ ಮುಂದುವರಿಯಲು ಈಗ ಭವಾನಿಪುರ ಉಪಚುನಾವಣೆಯಲ್ಲಿ ಗೆಲ್ಲಲೇಬೇಕಾಗಿದೆ.
ಕಳೆದ ಚುನಾವಣೆಯಲ್ಲಿ ಮಮತಾ ನಂದಿಗ್ರಾಮ ಕ್ಷೇತ್ರದಲ್ಲಿ ತಮ್ಮ ಆಪ್ತರಾಗಿದ್ದ ಆದರೆ ಬಳಿಕ ಬಿಜೆಪಿ ಸೇರಿದ್ದ ಸುವೇಂದು ಅಧಿಕಾರಿ ವಿರುದ್ಧ ಸೋಲು ಕಂಡಿದ್ದರು.
