Breaking NewsLatestಕಲಬುರ್ಗಿಜಿಲ್ಲಾ ಸುದ್ದಿ

ಪ್ರಿನ್ಸಿಪಾಲ್ ಮೇಲೆ ಆಸಿಡ್ ಎರಚಲು ಮುಂದಾದ ಪ್ರಾಧ್ಯಾಪಕ!

ಕಲಬುರಗಿ: ಸಹಾಯಕ ಪ್ರಾಧ್ಯಾಪಕನೋರ್ವ ಕಾಲೇಜಿನ ಪ್ರಿನ್ಸಿಪಾಲ್ ಮೇಲೆ ಆಸಿಡ್ ಹಾಕಿ ಹಲ್ಲೆ ಮಾಡಲು ಯತ್ನಿಸಿರುವ ಘಟನೆಯೊಂದು ನಗರದಲ್ಲಿ ಬೆಳಕಿಗೆ ಬಂದಿದೆ.

ಪ್ರತಿಷ್ಠಿತ ಹೆಚ್‌ಕೆಇ ಸೊಸೈಟಿಯ ಫಾರ್ಮರ್ಸಿ ಕಾಲೇಜ್ ನ ಪ್ರಿನ್ಸಿಪಾಲ್ ಡಾ.ಅರುಣ್ ಕುಮಾರ್ ಬೆನಕಳ ಮೇಲೆ ಆಸಿಡ್ ಎರಚಿ ಹಲ್ಲೆಗೆ ಯತ್ನ ಮಾಡಲಾಗಿದೆ. ಮಾರ್ಚ್ 21 ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಇದೆ ಫಾರ್ಮರ್ಸಿ ಕಾಲೇಜ್​ನಲ್ಲಿ ಸಹಾಯಕ ಪ್ರಾಧ್ಯಾಪಕನಾಗಿರುವ ಶಾಂತವೀರ ಸಲಗಾರ ಎಂಬಾತ ಆಸಿಡ್ ಎರಚಲು ಪ್ರಯತ್ನ‌ ಮಾಡಿದ್ದಾರೆ ಎಂದು ದೂರು ದಾಖಲಾಗಿದೆ. ಶಾಂತವೀರ ಪರೀವಿಕ್ಷಣಾ ಇನ್ಸಪೇಕ್ಟರ್ ಆಗಿ ನೇಮಕವಾಗಬೇಕಾಗಿತ್ತು. ಆದ್ರೆ ಪ್ರಿನ್ಸಿಪಾಲ್ ಅರುಣ್​ಕುಮಾರ್ ತಮ್ಮ ಕೈವಾಡದಿಂದ ಹುದ್ದೆ ತಪ್ಪಿಸಿದ್ದಾರೆ ಎಂದು ಶಾಂತವೀರ ಎಸಿಡ್ ದಾಳಿ ನಡೆಸಲು ಮುಂದಾಗಿದ್ದರಂತೆ. ಎಚ್‌ಕೆ‌ಇ ಫಾರ್ಮರ್ಸಿ ಕಾಲೇಜ್ ಆವರಣದಲ್ಲಿಯೇ ಆಸಿಡ್ ಎರಚಲು ಮುಂದಾಗಿದ್ದ ಶಾಂತವೀರ, ಅವಾಚ್ಯ ಶಬ್ದಗಳಿಂದ ಪ್ರಿನ್ಸಿಪಾಲ್​ ರನ್ನು ನಿಂದಿಸಿ ಹಲ್ಲೆಗೆ ಯತ್ನಿಸಿದ್ದಾರೆ. ಅಲ್ಲದೆ ತನ್ನ ಕಾರಿನಿಂದ ಡಿಕ್ಕಿ ಹೊಡೆದು ಅಫಘಾತಕ್ಕೆ ಯತ್ನಿಸಿದ್ದಾನೆ ಅಂತ ಆರೋಪಿಸಲಾಗಿದೆ.‌ ಈ ವೇಳೆ ಕೇಲ ಪ್ರಾಧ್ಯಪಕರು ಪ್ರಿನ್ಸಿಪಾಲ್‌ರನ್ನು ರಕ್ಷಣೆ ಮಾಡಿ ಮನೆಗೆ ಸೇಫ್ ಆಗಿ ತಲುಪಿಸಿದ್ದಾರೆ.

ಈ ಕುರಿತು ಬ್ರಹ್ಮಪೂರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದ್ರೆ ವಿದ್ಯಾರ್ಥಿಗಳಿಗೆ ಮಾದರಿ ಆಗಬೇಕಿದ್ದ ಪ್ರಾಧ್ಯಾಪಕ ಇಂತಹ ದುಷ್ಕೃತ್ಯಕ್ಕೆ ಕೈಹಾಕಿದ್ದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button