ಹಿಜಾಬ್ ಗಾಗಿ ಬೀದಿಗಿಳಿದರೆ ಕಾನೂನು ಕ್ರಮ: ಖಾಕಿ ಖಡಕ್ ವಾರ್ನಿಂಗ್!

ಬೆಂಗಳೂರು: ಈಗಾಗಲೇ ಸುಪ್ರೀಂ ಕೋರ್ಟ್ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿರಾಕರಿಸಿದ್ದು ಕಡ್ಡಾಯ ಸಮವಸ್ತ್ರಕ್ಕೆ ಆದೇಶ ಹೊರಡಿಸಿದೆ. ಅಲ್ಲದೆ ಮುಂದಿನ ವಾರದಿಂದ ನಡೆಯಲಿರುವ ಪರೀಕ್ಷೆಗಳಿಗೆ ಯಾರು ಹಿಜಾಬ್ ಧರಿಸಿ ಆಗಮಿಸುವಂತಿಲ್ಲ ಎಂದು ಶಿಕ್ಷಣ ಸಚಿವರು ಹೇಳಿದ್ದಾರೆ. ಆದರೆ ಇದೀಗ ಹಿಜಾಬ್ ಧರಿಸಲು ಅನುಮತಿ ನೀಡುವಂತೆ ಕೋರಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲು ವಿದ್ಯಾರ್ಥಿನಿಯರು ಮುಂದಾಗಿದ್ದಾರೆ.
ಉಡುಪಿಯ ವಿದ್ಯಾರ್ಥಿನಿಯರು ಬೆಂಗಳೂರಿಗೆ ಆಗಮಿಸಿದ್ದಾರೆ. ವಿದ್ಯಾರ್ಥಿನಿಯರ ಪರವಾಗಿ ಮಹಿಳಾ ಸಂಘಟನೆಯೊಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆಗೆ ಅನುಮತಿ ನೀಡುವಂತೆ ಕೋರಿ ಪೊಲೀಸರ ಬಳಿ ಮನವಿ ಮಾಡಿದ್ದಾರೆ. ಆದ್ರೆ ಪೊಲೀಸರು ಪ್ರತಿಭಟನೆ ನಡೆಸಲು ಅನುಮತಿ ನೀಡಿಲ್ಲ. ಜೊತೆಗೆ ಪ್ರತಿಭಟನೆ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಪೊಲೀಸರು ಅನುಮತಿ ನೀಡದಿದ್ದರೂ ಸೋಷಿಯಲ್ ಮೀಡಿಯಾದಲ್ಲಿ ಪ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುವ ಕುರಿತು ಮಾಹಿತಿಗಳು ಹರಿದಾಡುತ್ತಿವೆ. ಹೀಗಾಗಿ ಪೊಲೀಸರು ಹೈ ಅಲರ್ಟ್ ಆಗಿದ್ದು ಪ್ರತಿಭಟನೆ ನಡೆಸುವವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.
