ಶ್ರೀಗಂಧ ಬೆಳೆಗೆ ಸೂಕ್ತ ಪರಿಹಾರ ಕೊಡಿ: ರಕ್ತದಲ್ಲಿ ಪತ್ರ ಬರೆದು ಮನವಿ

ಚಿಕ್ಕಮಗಳೂರು: ಶ್ರೀಗಂಧ ಬೆಳೆಗೆ ಸೂಕ್ತ ಪರಿಹಾರಕ್ಕೆ ಆಗ್ರಹಿಸಿ, ಸರ್ಕಾರಕ್ಕೆ ಶ್ರೀಗಂಧ ಬೆಳೆಗಾರರು ರಕ್ತದಲ್ಲಿ ಮನವಿ ಪತ್ರ ಬರೆದ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ರಕ್ತದಲ್ಲಿ ಬರೆದ ಮನವಿ ಪತ್ರವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗೆ ಶ್ರೀಗಂಧ ಬೆಳೆಗಾರರು ಸಲ್ಲಿಸಿದ್ದು, ಕಳೆದ 30 ದಿನಗಳಿಂದ ಅನಿರ್ದಿಷ್ಟಾವದಿ ಧರಣಿಯನ್ನು ಶ್ರೀಗಂಧ ಬೆಳೆಗಾರರು ನಡೆಸುತ್ತಿದ್ದಾರೆ.
22 ರೈತ ಕುಟುಂಬದಿಂದ ಕಳೆದ 30 ದಿನಗಳಿಂದ ಈ ಪ್ರತಿಭಟನೆ ನಡೆಯುತ್ತಿದ್ದು, ಉಪವಾಸ ಸತ್ಯಾಗ್ರಹ, ಅರೆಬೆತ್ತಲೆ ಮೂಲಕ ಪ್ರತಿಭಟನೆ ನಡೆಸುತ್ತಿದ್ದಾರೆ.62 ಕೋಟಿ ಪರಿಹಾರದ ಜಾಗದಲ್ಲಿ ಎರಡೂವರೆ ಲಕ್ಷ ಪರಿಹಾರ ನೀಡುತ್ತಿದ್ದು, ಇದು ತುಂಬಾ ಅನ್ಯಾಯ ಎಂದು ಸರ್ಕಾರಕ್ಕೆ ರಕ್ತದಲ್ಲಿ ಪತ್ರವನ್ನು ಶ್ರೀಗಂಧದ ಬೆಳೆಗಾರರು ಬರೆದಿದ್ದಾರೆ. ಸೀರೆಂಜ್ ನಲ್ಲಿ ರಕ್ತ ತೆಗೆದು ಸರ್ಕಾರಕ್ಕೆ ಪತ್ರ ಬರೆದಿದ್ದು,ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ. ಕಳೆದೊಂದು ತಿಂಗಳಿನಿಂದ ಶ್ರೀಗಂಧ ಬೆಳಗಾರರು ಪ್ರತಿಭಟನೆ ನಡೆಸುತ್ತಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹಳಿಯೂರು ಗ್ರಾಮದಲ್ಲಿ ಈ ಧರಣಿ ನಡೆಸುತ್ತಿದ್ದಾರೆ. ಹೈಕೋರ್ಟ್ ನಿರ್ದೇಶನದಂತೆ ಪರಿಹಾರ ನೀಡಲು ಒತ್ತಾಯವನ್ನು ರೈತರು ಮಾಡುತ್ತಿದ್ದು, 22 ರೈತರಿಗೆ 62 ಕೋಟಿ ಪರಿಹಾರ ಬರಬೇಕು. ಆದರೆ ಸರ್ಕಾರ ಎರಡೂವರೆ ಲಕ್ಷ ಪರಿಹಾರ ನೀಡುತ್ತಿದೆ. ಈಗ ಘಟನೆಗೆ ಸಂಬಂಧಪಟ್ಟಂತೆ, ಕಳೆದೊಂದು ವಾರದಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.
