Breaking NewsLatestಕಲಬುರ್ಗಿಕ್ರೈಂಜಿಲ್ಲಾ ಸುದ್ದಿರಾಜ್ಯಸುದ್ದಿ

ಪಿಎಸ್ಐ ಪರೀಕ್ಷೆ ಅಕ್ರಮ: ಕಲಬುರಗಿಯಲ್ಲಿ 3 ಮಹಿಳೆಯರು ಸೇರಿ 6 ಜನರ ಬಂಧನ

ಕಲಬುರಗಿ: ಪೊಲೀಸ್ ಸಬ್ ಇನ್ ಸ್ಪೆಕ್ಟರ್ (ಪಿಎಸ್ಐ) ಪರೀಕ್ಷೆಯಲ್ಲಿ ಅಕ್ರಮ ಸಂಬಂಧಿತವಾಗಿ ಸಿಐಡಿ ಪೊಲೀಸರು ಮೂವರು ಮಹಿಳಾ ಮೇಲ್ವಿಚಾರಕಿಯರು ಸೇರಿ ಮತ್ತೆ ಆರು ಜನರನ್ನು ಬಂಧಿಸಿದ್ದಾರೆ.


ಕಲಬುರಗಿ ಜ್ಞಾನ ಜ್ಯೋತಿ ಇಂಗ್ಲಿಷ್ ಮೀಡಿಯಂ ಶಾಲೆಯ ಮಹಿಳಾ ಮೇಲ್ವಿಚಾರಕಿಯರಾದ ಸುಮಾ, ಸಿದ್ದಮ್ಮ, ಸಾವಿತ್ರಿ ಎಂಬ ಮೂರು ಮಹಿಳೆಯರು ಹಾಗು ರಾಯಚೂರ ಮೂಲದ ಪ್ರವೀಣ್ ಕುಮಾರ್ ಕೆ, ಆಳಂದ ತಾಲೂಕಿನ ಚೇತನ್ ನಂದಗಾಂವ್, ಕಲಬುರಗಿಯ ಹಾಲ್ ಸುಲ್ತಾನ್‌ಪುರ ನಿವಾಸಿ ಅರುಣ್ ಪಾಟೀಲ್ ಬಂಧಿತರು. ಬಂಧಿತರನ್ನ ಕಲಬುರಗಿಯ ಜೆಎಮ್ಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

545 ಪಿಎಸ್ಐ ಹುದ್ದೆ ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ಭಾರಿ ಅಕ್ರಮ ನಡೆದಿರುವ ಆರೋಪ ಕೇಳಿಬಂದಿದೆ. ಈ ಹಿನ್ನಲೆ ಸಿಐಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದೆ ವಿಚಾರಕ್ಕೆ ಸಂಬಂದಿಸಿದಂತೆ ಇತ್ತೀಚೆಗೆ ಬೆಂಗಳೂರಿನಿಂದ ಆಗಮಿಸಿದ ಸಿಐಡಿ ಪೊಲೀಸರು ಸೇಡಂ ಮೂಲದ ಎಎಸ್ಐ ಪುತ್ರ ವಿರೇಶ ಎಂಬ ಪರೀಕ್ಷಾರ್ಥಿ ಅಭ್ಯರ್ಥಿಯನ್ನು ಬಂಧಿಸಿ ಬೆಂಗಳೂರಿಗೆ ಕರೆದೊಯ್ದಿದ್ದಾರೆ. ತನಿಕೆ ಚುರುಕುಗೊಂಡಿದ್ದು ಇನ್ನೂ ಹಲವರು ಬಂಧನಕ್ಕೊಳಗಾಗುವ ಸಾಧ್ಯತೆ ಇದೆ.

Spread the love

Related Articles

Leave a Reply

Your email address will not be published. Required fields are marked *

Back to top button