Breaking NewsLatestಕಲಬುರ್ಗಿಜಿಲ್ಲಾ ಸುದ್ದಿರಾಜಕೀಯರಾಜ್ಯಸುದ್ದಿ
ಕಾಂಗ್ರೆಸ್ ಕೊರಳಿಗೂ ಸುತ್ತಿದ ಪಿಎಸ್ಐ ನೇಮಕಾತಿ ಅಕ್ರಮ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನ ಬಂಧನ

ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಬಿಜೆಪಿ ಜೊತೆಗೆ ಈಗ ಕಾಂಗ್ರೆಸ್ ಕೊರಳಿಗೂ ಸುತ್ತಿಕೊಂಡಿದೆ. ಅಕ್ರಮದಲ್ಲಿ ಪಾಲ್ಗೊಂಡ ಕಾಂಗ್ರೆಸ್ ಮುಖಂಡನ ಬಂಧನವಾಗಿದೆ. ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಬ್ಲೂಟೂತ್ ಡಿವೈಸ್ ಮೂಲಕ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಸಿ ಅಕ್ರಮ ಮಾಡಿರುವ ಆರೋಪದ ಹಿನ್ನಲೆ ಸಿಐಡಿ ತಂಡ ಅಫಜಲಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಾಂತೇಶ ಪಾಟೀಲ್ ಅವರನ್ನು ಬಂಧಿಸಿದ್ದಾರೆ.
ಅಫಜಲಪುರ ಪಟ್ಟಣದ ನ್ಯಾಷನಲ್ ಫಂಕ್ಷನ್ ಹಾಲ್ ನಲ್ಲಿ ಮಹಾಂತೇಶ ಪಾಟೀಲ್ ನನ್ನು ಬಂಧಿಸಲಾಗಿದೆ. ನಾಳೆ 101 ಸಾಮೂಹಿಕ ವಿವಾಹವನ್ನು ಮಹಾಂತೇಶ್ ಪಾಟೀಲ್ ಹಾಗೂ ಆತನ ಸಹೋದರ ಆರ್.ಡಿ.ಪಾಟೀಲ್ ಏರ್ಪಡಿಸಿದ್ದರು. ಅಲ್ಲಿಗೆ ತೆರಳಿದ ಸಿಐಡಿ ಪೊಲೀಸರು ಮಹಾಂತೇಶ್ ಪಾಟೀಲ್ನನ್ನು ಬಂಧಿಸಿದ್ದಾರೆ. ನಿನ್ನೆಯಷ್ಟೆ ಕಾಂಗ್ರೆಸ್ ಶಾಸಕ ಎಮ್ವೈ ಪಾಟೀಲ್ ಗನ್ಮ್ಯಾನ್ ಹಯ್ಯಾಳ ದೇಸಾಯಿ ಬಂಧನವಾಗಿತ್ತು. ಇಲ್ಲಿವರೆಗೆ ಬಂಧಿತರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.
