Breaking NewsLatestಮನರಂಜನೆಸಿನಿಮಾಸೆಲೆಬ್ರಿಟಿಸ್ಯಾಂಡಲ್ ವುಡ್

ಜೇಮ್ಸ್ ಸಿನಿಮಾದ ಪ್ರಿರಿಲೀಸ್ ಕಾರ್ಯಕ್ರಮಕ್ಕೆ ಕೌಂಟ್ ಡೌನ್: ಮುಖ್ಯ ಅತಿಥಿ ಯಾರು?

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಬಹುನಿರೀಕ್ಷಿತ ಕೊನೆಯ ಸಿನಿಮಾ ಜೇಮ್ಸ್ ಕಣ್ಮುಂಬಿಕೊಳ್ಳಲು ಅಭಿಮಾನಿಗಳು ಕಾಯ್ತಿದ್ದಾರೆ. ಈಗಾಗ್ಲೆ ಸಲಂ ಸೋಲ್ಜರ್ ಲಿರಿಕಲ್ ವಿಡಿಯೋ ನೋಡಿದ ಅಭಿಮಾನಿಗಳು ಥಿಯೇಟರ್ ನಲ್ಲಿ ಚಿತ್ರ ಕಣ್ಮುಂಬಿಕೊಳ್ಳಲು ರೆಡಿಯಾಗಿದ್ದಾರೆ. ಈ ಮಧ್ಯೆ ಚಿತ್ರತಂಡ ಚಿತ್ರದ ಕೊನೆಯ ಹಂತದ ಪ್ರಚಾರವನ್ನ ಭರ್ಜರಿಯಾಗಿ ಆರಂಭಿಸಿದೆ.

ಜೇಮ್ಸ್ ಸಿನಿಮಾ ಬಿಡುಗಡೆ ಆಗಲು ಇನ್ನೂ ಕೇವಲ ಆರೇ ಆರು ದಿನ ಮಾತ್ರವೇ ಭಾಕಿ ಇದೆ. ಪುನೀತ್ ಹುಟ್ಟುಹಬ್ಬದ ಪ್ರಯುಕ್ತ ಚಿತ್ರ ಬಿಡುಗಡೆ ಆಗ್ತಿದ್ದು ಈಗಾಗ್ಲೆ ಅಭಿಮಾನಿಗಳು ಭರ್ಜರಿ ತಯಾರಿ ಮಾಡ್ಕೊಂಡಿದ್ದಾರೆ. ಈ ಮಧ್ಯೆ ಚಿತ್ರತಂಡ ಪ್ರಿ ರಿಲೀಸ್ ಕಾರ್ಯಕ್ರಮ ಹಮ್ಮಿಕೊಂಡಿದೆ.

ಜೇಮ್ಸ್ ಸಿನಿಮಾದ ಬಗ್ಗೆ ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆ ಇದೆ.  ಈ ಹಿಂದೆ ಚಿತ್ರದ ಟೀಸರ್ ರಿಲೀಸ್ ಆದ ಸಂದರ್ಭದಲ್ಲಿ ಹಬ್ಬದಂತೆ ಸಂಭ್ರಮಿಸಿದ್ದ ಅಭಿಮಾನಿಗಳು ಸಿನಿಮಾದ ರಿಲೀಸ್ ದಿನವನ್ನ ಮತ್ತಷ್ಟು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಿದ್ದಾರೆ. ಅಂದ್ಹಾಗೆ ಚಿತ್ರತಂಡ ಮಾರ್ಚ್ 17ರಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನಲ್ಲಿ ಪ್ರಿ ರಿಲೀಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಜೇಮ್ಸ್ ಚಿತ್ರದ ಪ್ರಿರಿಲೀಸ್ ಕಾರ್ಯಕ್ರಮಕ್ಕೆ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಮುಖ್ಯ ಅತಿಥಿಗಳಾಗಿ ಆಗಮಿಸುತ್ತಿದ್ದಾರೆ. ಇದ್ರ ಜೊತೆಗೆ ದೊಡ್ಮನೆಯ ನಟರುಗಳಾದ ಶ್ರೀಮುರುಳೀ, ಯುವ ರಾಜ್ ಕುಮಾರ್, ವಿನಯ್ ರಾಜ್ ಕುಮಾರ್, ಧೀರೇಜ್ ರಾಮ್ ಕುಮಾರ್ ಸೇರಿದಂತೆ ಸಾಕಷ್ಟು ಮಂದಿ ಆಗಮಿಸುವ ಸಾಧ್ಯತೆ ಇದೆ. ಜೊತೆಗೆ ಸ್ಯಾಂಡಲ್ ವುಡ್ ನ ಸಾಕಷ್ಟು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗೋ ಸಾಧ್ಯತೆ ಇದೆ.

ಜೇಮ್ಸ್ ಸಿನಿಮಾ ಏಕಕಾಲಕ್ಕೆ 5 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ. ಜೇಮ್ಸ್ ಸಿನಿಮಾ 4 ಸಾವಿರ ಸ್ಕ್ರೀನ್ ಗಳಲ್ಲಿ ಬಿಡುಗಡೆಯಾಗಲಿದೆ.

Spread the love

Related Articles

Leave a Reply

Your email address will not be published. Required fields are marked *

Back to top button