Breaking NewsLatestಮನರಂಜನೆಸಿನಿಮಾಸ್ಯಾಂಡಲ್ ವುಡ್

ಪುನೀತ್ ನಟಿಸಬೇಕಿದ್ದ ಚಿತ್ರದಲ್ಲಿ ಯುವರಾಜ್ ಕುಮಾರ್?

ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರನ್ನ ಕಳೆದುಕೊಂಡ ಚಿತ್ರರಂಗ ಬಡವಾಗಿದೆ. ಪುನೀತ್ ರ ಅತ್ಯುತ್ತಮ ಚಿತ್ರಗಳನ್ನ ಜನರು ಮಿಸ್ ಮಾಡಿಕೊಳ್ತಿದ್ದಾರೆ. ಪುನೀತ್ ರ ಸಾಕಷ್ಟು ಸಿನಿಮಾಗಳು ಮಾತುಕತೆಯ ಹಂತದಲ್ಲಿರುವಾಗಲೇ ಪುನೀತ್ ನಿಧನರಾಗಿದ್ದರು. ಪುನೀತ್ ಹಾಗೂ ಸಂತೋಷ್ ಆನಂದ್ ರಾಮ್ ಕಾಂಬಿನೇಷನ್ ನಲ್ಲಿ ಸಿನಿಮಾವೊಂದು ಸೆಟ್ಟೇರಬೇಕಿತ್ತು. ಆದರೆ ಅಷ್ಟರಲ್ಲಾಗಲೇ ಪುನೀತ್ ನಿಧನರಾಗಿದ್ದರು, ಇದೀಗ ಅದೇ ಕಥೆಯನ್ನ ಇಟ್ಟುಕೊಂಡು ಯುವರಾಜ್ ಕುಮಾರ್ ಗೆ ಸಂತೋಷ್ ಆನಂದ್ ರಾಮ್ ನಿರ್ದೇಶನ ಮಾಡುತ್ತಾರೆ ಅನ್ನೋ ಮಾತು ಕೇಳಿ ಬರ್ತಿದೆ.

ಈ ಹಿಂದೆ ಪುನೀತ್ ಹಾಗೂ ಸಂತೋಷ್ ಆನಂದ್ ರಾಮ್ ಕಾಂಬಿನೇಷನ್ ನಲ್ಲಿ ಮೂಡಿ ಬಂದಿದ್ದ ರಾಜಕುಮಾರ ಹಾಗೂ ಯುವರತ್ನ ಸಿನಿಮಾಗಳು ಸೂಪರ್ ಹಿಟ್ ಆಗಿದ್ದವು. ಇವರ ಕಾಂಬಿನೇಷನ್ ನಲ್ಲಿ ಮುಂದಿನ ಆಕ್ಷನ್ ಸಿನಿಮಾ ಸೆಟ್ಟೇರಬೇಕಿತ್ತು, ಆದ್ರೆ ಪುನೀತ್ ಅವರ ಹಠತ್ ನಿಧನ ಎಲ್ಲದಕ್ಕೂ ಬ್ರೇಕ್ ಹಾಕಿತ್ತು,

ಪುನೀತ್ ರಾಜ್ಕುಮಾರ್ ಅವರಿಗಾಗಿ ಸಿದ್ಧಪಡಿಸಿದ್ದ ಕಥೆಯನ್ನು ಸ್ವಲ್ಪ ಬದಲಾವಣೆ ಮಾಡಿ, ಆ ಚಿತ್ರಕ್ಕೆ ಯುವ ರಾಜ್ಕುಮಾರ್ ಅವರನ್ನು ಹೀರೋ ಆಗಿಸುವ ಪ್ರಯತ್ನ ನಡೆಯುತ್ತಿದೆ ಎನ್ನಲಾಗಿದೆ. ರಾಘವೇಂದ್ರ ರಾಜ್ಕುಮಾರ್ ಅವರ ಎರಡನೇ ಪುತ್ರನಾದ ಯುವ ರಾಜ್ಕುಮಾರ್ ಅವರು ಈ ಸಿನಿಮಾದಲ್ಲಿ ನಟಿಸಿದರೆ ಸೂಕ್ತ ಎಂಬ ಅಭಿಪ್ರಾಯ ಅಪ್ಪು ಅಭಿಮಾನಿಗಳ ವಲಯದಲ್ಲೂ ಕೇಳಿಬಂದಿದೆ. ಹಾಗಾಗಿ ಈ ಸಿನಿಮಾ ಸೆಟ್ಟೇರುವ ಸಾಧ್ಯತೆ ದಟ್ಟವಾಗಿದ್ದು, ಚಿತ್ರವನ್ನ ‘ಹೊಂಬಾಳೆ ಫಿಲ್ಮ್ಸ್’ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಆಗಲಿದೆ ಅನ್ನೋ ಮಾತುಗಳು ಕೇಳಿ ಬರ್ತಿದೆ.

ಏ.24ರಂದು ಡಾ. ರಾಜ್ಕುಮಾರ್ ಜನ್ಮದಿನ. ಅಂದೇ ಸಂತೋಷ್ ಆನಂದ್ ರಾಮ್ ಮತ್ತು ಯುವ ರಾಜ್ಕುಮಾರ್ ಕಾಂಬಿನೇಷನ್ ಚಿತ್ರದ ಬಗ್ಗೆ ಅಧಿಕೃತ ಮಾಹಿತಿ ಸಿಗಲಿದೆ ಅನ್ನೋ ಸುದ್ದಿ ಗಾಂಧಿನಗರದ ತುಂಬೆಲ್ಲಾ ಹರಿದಾಡ್ತಿದೆ.

Spread the love

Related Articles

Leave a Reply

Your email address will not be published. Required fields are marked *

Back to top button