Breaking NewsLatestಮನರಂಜನೆಸಿನಿಮಾಸ್ಯಾಂಡಲ್ ವುಡ್
ಪುನೀತ್ ರಾಜ್ ಕುಮಾರ್ ಮನೆಗೆ ಸಂಜಯ್ ದತ್ ಭೇಟಿ

ಕೆಜಿಎಫ್- 2 ಸಿನಿಮಾದ ಟ್ರೈಲರ್ ಬಿಡುಗಡೆಗೆ ಆಗಮಿಸಿರುವ ಬಾಲಿವುಡ್ ನಟ ಸಂಜಯ್ ದತ್ ಇಂದು ಪುನೀತ್ ರಾಜ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಮನೆಯಲ್ಲಿ ರಾಘವೇಂದ್ರ ರಾಜ್ ಕುಮಾರ್ ಮತ್ತು ಅವರ ಪತ್ನಿ ಹಾಗೂ ಮಕ್ಕಳು ಇದ್ದರು.
ಕುಟುಂಬದವರ ಜೊತೆ ಸಂಜಯ್ ದತ್ ಕೆಲ ಹೊತ್ತು ಮಾತುಕತೆ ನಡೆಸಿದ್ದು, ನಂತರ ಅವರು ವಾಪಸ್ ಆದರು. ಕೆಜಿಎಫ್ 2 ಸಿನಿಮಾದ ಟ್ರೈಲರ್ ಇಂದು ಸಂಜೆ 6.40ಕ್ಕೆ ಬಿಡುಗಡೆ ಆಗಲಿದೆ. ಐದು ಭಾಷೆಗಳಲ್ಲಿ ಸಿನಿಮಾ ಬಿಡುಗಡೆ ಆಗುತ್ತಿದ್ದು, ಹಾಗಾಗಿ ಐದು ಭಾಷೆಯಲ್ಲೂ ಏಕಕಾಲಕ್ಕೆ ಟ್ರೈಲರ್ ರಿಲೀಸ್ ಮಾಡಲು ಚಿತ್ರ ತಂಡ ಸಿದ್ಧತೆ ಮಾಡಿಕೊಂಡಿದ್ದಾರೆ.
