Breaking NewsLatestರಾಷ್ಟ್ರೀಯಸುದ್ದಿ
ಬೆಲೆ ಏರಿಕೆ ಖಂಡಿಸಿ ರಾಹುಲ್ ಗಾಂಧಿ ಪ್ರತಿಭಟನೆ

ನವದೆಹಲಿ: ಕಳೆದ 10 ದಿನಗಳಿಂದ ಪೆಟ್ರೋಲ್, ಡೀಸೆಲ್ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇದನ್ನು ಖಂಡಿಸಿ ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಅವರು ಇಂದು ಪ್ರತಿಭಟನೆ ನಡೆಸಿದರು.
ದೆಹಲಿಯ ವಿಜಯ್ ಚೌಕ್ನಲ್ಲಿ ಇಂದು ಮಾತನಾಡಿದ ರಾಹುಲ್ ಗಾಂಧಿ ಅವರು, ಕಳೆದ 10 ದಿನಗಳಿಂದ ಪೆಟ್ರೋಲ್, ಡೀಸೆಲ್ ಬೆಲೆ ಒಂಬತ್ತು ಬಾರಿ ಏರಿಕೆಯಾಗಿದೆ. ಏರುತ್ತಿರುವ ಬೆಲೆಯನ್ನು ನಿಯಂತ್ರಣಕ್ಕೆ ತರಬೇಕು ಎಂದು ನಾವು ಒತ್ತಾಯಿಸುತ್ತೇವೆ. ಈ ವಿಷಯವಾಗಿ ಕಾಂಗ್ರೆಸ್ ಇಂದು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.
