Breaking NewsLatestಮೆಟ್ರೋರಾಜ್ಯಸುದ್ದಿ

ಇಂದಿನಿಂದ ಮೂರು ದಿನಗಳ ಕಾಲ ಕರ್ನಾಟಕದಲ್ಲಿ ಮಳೆ

ಬೆಂಗಳೂರು: ಬಿಸಲಿನ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರಿಂದ ಜನರು ಬೇಸತ್ತು ಹೋಗಿದ್ದಾರೆ. ಹೀಗಾಗಿ ಆಗಾಗ ಮಳೆರಾಯ ತಂಪೆರೆಸುತ್ತಾನೆ. ಈಗಾಗಲೇ ಕೆಲ ಜಿಲ್ಲೆಗಳಲ್ಲಿ ಸುಮಾರು ಪ್ರಮಾಣದಲ್ಲಿ ಮಳೆಯಾಗಿದೆ. ಇನ್ನೂ ಮಳೆ ಕಡಿಮೆಯಾಗುವ ಲಕ್ಷಣಗಳು ಕಾಣುತ್ತಿಲ್ಲ. ಏ. 9ರವರೆಗೂ ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಕಳೆದೊಂದು ವಾರದಿಂದ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಇಂದು ಕೂಡ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ, ಹಾಸನ, ದಾವಣೆಗೆರೆ, ಬೆಂಗಳೂರು, ಮೈಸೂರು, ಕೊಡಗು ಮುಂತಾದ ಕಡೆ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಇಂದಿನಿಂದ ಏ. 9ರವರೆಗೆ ಮಳೆ ಮುಂದುವರೆಯಲಿದೆ.

ಕರ್ನಾಟಕ, ತಮಿಳುನಾಡು, ಕೇರಳದಲ್ಲಿ ಇಂದು ಮಳೆಯಿಂದ ಹಳದಿ ಅಲರ್ಟ್​ ಘೋಷಿಸಲಾಗಿದೆ. ಕೇರಳ, ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಏಪ್ರಿಲ್ 9ರವರೆಗೂ ಮಳೆಯಾಗಲಿದೆ. ಕರಾವಳಿ ಮಾತ್ರವಲ್ಲದೆ ಬೆಂಗಳೂರು, ಚಾಮರಾಜನಗರ, ಮೈಸೂರು, ಹಾಸನ, ಮಂಡ್ಯ, ರಾಮನಗರ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಕೂಡ ಇಂದು ಮಳೆಯಾಗುವ ಸಾಧ್ಯತೆ ಇದೆ. ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗುವ ಸಾಧ್ಯತೆಯಿದ್ದು, ಇಂದಿನಿಂದ 3 ದಿನ ಗುಡುಗು ಸಹಿತ ಮಳೆಯಾಗಲಿದೆ.

Related Articles

Leave a Reply

Your email address will not be published. Required fields are marked *

Back to top button