Breaking NewsLatestಕ್ರಿಕೆಟ್ರಾಷ್ಟ್ರೀಯಸುದ್ದಿ
ಹೈದರಾಬಾದ್ ವಿರುದ್ಧ ರಾಜಸ್ಥಾನಕ್ಕೆ ಭರ್ಜರಿ ಗೆಲುವು:

ಪುಣೆ: ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ ರಾಯಲ್ಸ್ ತಂಡದ ಬ್ಯಾಟಿಂಗ್ ಶಕ್ತಿಯ ಮುಂದೆ ಸನ್‌ರೈಸರ್ಸ್ ಹೈದರಾಬಾದ್ ಶರಣಾಯಿತು.
ಮಹಾರಾಷ್ಟ್ರ ರಾಜ್ಯ ಕ್ರಿಕೆಟ್ ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಸನ್‌ರೈಸರ್ಸ್ ಹೈದರಾಬಾದ್ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತ್ತು.
ಮಂಗಳವಾರ ರಾತ್ರಿ, ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡ 20 ಓವರ್‌ಗಳಿಗೆ 6 ವಿಕೆಟ್ ನಷ್ಟಕ್ಕೆ 210 ರನ್ ಗಳಿಸಿತ್ತು. ಬಳಿಕ ಈ ಬೃಹತ್ ಮೊತ್ತದ ಬೆನ್ನು ಹತ್ತಿದ ಸನ್‌ರೈಸರ್ಸ್ ಹೈದರಾಬಾದ್ 20 ಓವರ್‌ಗಳಿಗೆ 7 ವಿಕೆಟ್ ನಷ್ಟಕ್ಕೆ ಕೇವಲ 149 ರನ್‌ಗಳಿಗೆ ಆಲೌಟ್ ಆಯಿತು.
