16 ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ 90 ಲಕ್ಷ ಅನುದಾನ ಬಿಡುಗಡೆ

ಧಾರವಾಡ: ಜಿಲ್ಲೆಯ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ವಿವಿಧ ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ ರಾಜ್ಯ ಸರ್ಕಾದಿಂದ ಅನುದಾನ ಬಿಡುಗಡೆ ಮಾಡಲಾಗಿದೆ. ಲೋಕಸಭಾ ಕ್ಷೇತ್ರದ ಒಟ್ಟು 16 ದೇವಸ್ಥಾನಗಳಿಗೆ ರಾಜ್ಯ ಸರ್ಕಾರದಿಂದ 90 ಲಕ್ಷ ರೂಪಾಯಿ ಅನುದಾನ ಬಿಡುಗಡೆಯಾಗಿದೆ.
ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಸ್ಥಳೀಯರ ಆಯಾ ಕ್ಷೇತ್ರದ ಶಾಸಕರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿನಂತಿಸಿದ್ದರು. ಶಾಸಕರ ಮನವಿ ಮೇರೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಪ್ರಯತ್ನದಿಂದ ಇದೀಗ ಅನುದಾನ ಬಿಡುಗಡೆಯಾಗಿದೆ.
ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆಯವರಿಗೆ ನೀಡಿದ ನಿರ್ದೇಶನ ಮೇರೆಗೆ ಧಾರವಾಡ ಲೋಕಸಭಾ ವ್ಯಾಪ್ತಿಯಲ್ಲಿ ಬರುವ ಹುಬ್ಬಳ್ಳಿ, ಕುಂದಗೋಳ, ನವಲಗುಂದ, ಕಲಘಟಗಿ, ಧಾರವಾಡ ವಿಧಾನಸಭಾ ಕ್ಷೇತ್ರಗಳ ವಿವಿಧ ದೇವಸ್ಥಾನಗಳ ಜೀರ್ಣೋದ್ಧಾರಕ್ಕೆಂದು 90 ಲಕ್ಷ ರೂಪಾಯಿ ಅನುದಾನ ಈಗ ಬಿಡುಗಡೆಯಾಗಿದೆ.
ಈ ಹಿಂದೆಯಲ್ಲಾ ಕೇವಲ 50 ಸಾವಿರದಿಂದ 1 ಲಕ್ಷದವರೆಗೆ ಮಾತ್ರ ಅನುದಾನವನ್ನು ಸೀಮಿತವಾಗಿತ್ತು. ಆದರೆ ಈ ಬಾರಿ ಅನುದಾನ ಪ್ರಮಾಣ 5 ಲಕ್ಷದಿಂದ 10 ಲಕ್ಷದವರೆಗೆ ಹೆಚ್ಚಳವಾಗಿದ್ದು, ದೇವಸ್ಥಾನಗಳ ಆಡಳಿತ ಮಂಡಳಿಯಲ್ಲಿ ಇದು ಸಂತಸ ಮೂಡಿಸಿದೆ.

