Breaking NewsLatestಜಿಲ್ಲಾ ಸುದ್ದಿಹುಬ್ಬಳ್ಳಿ - ಧಾರವಾಡ

ಜೇಮ್ಸ್ ಚಿತ್ರ ತೆಗೆದು RRR ಚಿತ್ರ ಪ್ರದರ್ಶನಕ್ಕೆ ಅವಕಾಶ

ಧಾರವಾಡ: ವಿಜಯ ಚಿತ್ರಮಂದಿರದಲ್ಲಿ ಜೇಮ್ಸ್ ಚಿತ್ರದ ಪ್ರದರ್ಶನ ಅವಧಿ ಪೂರ್ಣಗೊಂಡ ಹಿನ್ನೆಲೆ ಜೇಮ್ಸ್ ಚಿತ್ರ ತೆಗೆದು ಹಾಕಿ RRR ಚಿತ್ರ ಪ್ರದರ್ಶನಕ್ಕೆ ಚಿತ್ರಮಂದಿರ ಮಾಲೀಕರು ಅವಕಾಶ ಮಾಡಿಕೊಟ್ಟಿದ್ದಾರೆ. ಅಪ್ಪು ಅಭಿನಯದ ಕೊನೆಯ ಚಿತ್ರ ಜೇಮ್ಸ್ ಪ್ರದರ್ಶನಕ್ಕೆ ವಿಜಯ ಥಿಯೇಟರ್ ಮಾಲೀಕರು ಒಂದು ವಾರ ಪ್ರದರ್ಶನದ ಅನುಮತಿ ಪಡೆದುಕೊಂಡಿದ್ದರು. ಆ ಅವಧಿ ಈಗ ಪೂರ್ಣಗೊಂಡ ಕಾರಣ ಇಂದಿನಿಂದ RRR ಚಿತ್ರ ಪ್ರದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ.

ರಾಜ್ಯದ ಅನೇಕ ಕಡೆಗಳಲ್ಲಿ ಜೇಮ್ಸ್ ಚಿತ್ರ ತೆಗೆದು ಹಾಕಿದ್ದಕ್ಕೆ ಪುನೀತ್ ರಾಜಕುಮಾರ ಅಭಿಮಾನಿಗಳು ಆಕ್ರೋಶಗೊಂಡಿದ್ದಾರೆ. ಜೊತೆಗೆ ಹಲವು ಕಡೆಗಳಲ್ಲಿ ಪ್ರತಿಭಟನೆಗಳನ್ನು ಮಾಡಿ ಆಕ್ರೋಶ ಹೊರಹಾಕಿದ್ದರು. ಆದರೆ ಜೇಮ್ಸ್ ಚಿತ್ರ ತೆಗೆದ ಹಾಕಿರುವ ಕುರಿತು ಪುನೀತ್ ಅಭಿಮಾನಿಗಳು ವಿರೋಧ ವ್ಯಕ್ತಪಡಿಸದೆ, ನಗರದ ಪದ್ಮಾ ಚಿತ್ರ ಮಂದಿರದಲ್ಲಿ ಜೇಮ್ಸ್ ಚಿತ್ರವನ್ನು ವೀಕ್ಷಿಸುತ್ತಿದ್ದಾರೆ.

ವಿಜಯ ಚಿತ್ರಮಂದಿರ ಹೊರತುಪಡಿಸಿ ಧಾರವಾಡದ ಪ್ರತಿಷ್ಠಿತ ಪದ್ಮಾ ಚಿತ್ರಮಂದಿರದಲ್ಲಿ ಜೇಮ್ಸ್ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಅಪ್ಪು ಅಭಿಮಾನಿಗಳು ನೂರಾರು ಸಂಖ್ಯೆಯಲ್ಲಿ ಬಂದು ಪುನೀತ್ ರಾಜಕುಮಾರವರ ಕೊನೆಯ ಚಿತ್ರವನ್ನು ಕಣ್ತುಂಬಿಕೊಳ್ಳಲಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button